ನವದೆಹಲಿ:ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿದ್ದು, ಅದರ ಸಂಭ್ರಮಾಚರಣೆ ಸಲುವಾಗಿ ಬಿಜೆಪಿ ಇದೀಗ ಭಾರಿ ಪ್ರಚಾರ ಕಾರ್ಯಕ್ರಮಕ್ಕೆ ಮುಂದಾಗಿದೆ. ಮಾತ್ರವಲ್ಲ, ತಿಂಗಳಿಡೀ ದೇಶಾದ್ಯಂತ ರ‌್ಯಾಲಿ ನಡೆಸಲಿದೆ.
ಮೇ 30ರಂದು 9 ವರ್ಷ ಪೂರ್ಣಗೊಳ್ಳಲಿದ್ದು, ಒಂದು ತಿಂಗಳ ಕಾಲ ಅಂದರೆ ಜೂ. 30ರ ವರೆಗೂ ದೇಶಾದ್ಯಂತ ಸುಮಾರು 50 ರ‌್ಯಾಲಿಗಳನ್ನು ನಡೆಸುವ ಮೂಲಕ ಸರ್ಕಾರದ ಸಾಧನೆಗಳ ವಿವರ ಜನರಿಗೆ ತಲುಪಿಸುವ ಯೋಜನೆ ಹಾಕಿಕೊಂಡಿದೆ. ಆ ಪೈಕಿ ಸುಮಾರು 25 ರ‌್ಯಾಲಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಖುದ್ದು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಶನಿವಾರವೂ ಪಾಸ್‌ಪೋರ್ಟ್ ಸೇವೆ ಲಭ್ಯ; ನಾಳೆ ರಾಜ್ಯದ 8 ಪಿಒಪಿಎಸ್‌ಕೆಗಳಲ್ಲಿ ಚಾಲನೆ
ರಾಜಸ್ಥಾನದ ಅಜ್ಮೇರ್​ನಲ್ಲಿ ಮೇ 31ರಂದು ಈ ಮೆಗಾ ರ‌್ಯಾಲಿಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ, ಕೇಂದ್ರ ಸಚಿವ ಅಮಿತ್ ಷಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:9 ವರ್ಷ, 9 ಪ್ರಶ್ನೆ: ಮೌನ ಮುರಿದು ಉತ್ತರಿಸಿ ಎಂದು ಮೋದಿಗೆ ಕಾಂಗ್ರೆಸ್ ಸವಾಲು
ಮತ್ತೊಂದೆಡೆ ಲೋಕಸಭೆ ಚುನಾವಣೆ ಇನ್ನೇನು ಒಂದು ವರ್ಷದಲ್ಲಿ ನಡೆಯಲಿದ್ದು, ಆ ಹಿನ್ನೆಲೆಯಲ್ಲೂ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಈ ರ‌್ಯಾಲಿಗಳನ್ನು ಹಮ್ಮಿಕೊಂಡಿದೆ ಎಂದೂ ಹೇಳಲಾಗುತ್ತಿದೆ. ನರೇಂದ್ರ ಮೋದಿ ಮೊದಲ ಸಲ ಪ್ರಧಾನಿಯಾಗಿ 2014ರ ಮೇ 26ರಂದು ಹಾಗೂ ಎರಡನೇ ಅವಧಿಯಲ್ಲಿ ಪ್ರಧಾನಿಯಾಗಿ 2019ರ ಮೇ 30ರಂದು ಪ್ರಮಾಣವಚನ ಸ್ವೀಕರಿಸಿದ್ದರು. –ಏಜೆನ್ಸೀಸ್
ದಂಪತಿ ಮಧ್ಯೆ ಪ್ರೀತಿ ಇದ್ದರೂ ದಾಂಪತ್ಯ ದ್ರೋಹ; ವಿವಾಹೇತರ ಸಂಬಂಧದ ಬಗ್ಗೆ ಇಲ್ಲ ಪಶ್ಚಾತ್ತಾಪ: ಏನಿದು ಅಧ್ಯಯನ?

VIDEO | ಕಣ್ತುಂಬಿಕೊಳ್ಳಿ ನೂತನ ಸಂಸತ್ ಭವನದ ಈ ಸೊಬಗ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + five =
Remember me
