ನವದೆಹಲಿ:ಮುಂಬರುವ ಪಂಚರಾಜ್ಯ, ಲೋಕಸಭೆ ಚುನಾವಣೆಯ ದೃಷ್ಟಿಯಿಂದ ಹೆಚ್ಚು ಮತದಾರರನ್ನು ಸೆಳೆಯಲು ಮುಂದಾಗಿರುವ ಬಿಜೆಪಿ ದೇಶಾದ್ಯಂತ 200ಕ್ಕೂ ಹೆಚ್ಚು ಕಾಲ್ ​​ಸೆಂಟರ್​ಗಳನ್ನು ತೆರೆಯಲು ಸಿದ್ದತೆ ನಡೆಸಿದೆ. ಈ ಮೂಲಕ ರಾಷ್ಟ್ರಮಟ್ಟದಲ್ಲಿ ಮತದಾರರೊಂದಿಗೆ ಸಂಪರ್ಕ ಸಾಧಿಸಲು ಮುಂದಾಗಿದೆ.
ಇದರ ಹೊಣೆಯನ್ನು ಕೇಂದ್ರ ಗೃಹ ಸಚಿವ ಅಮಿತ್​ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್​ ಹಾಗೂ ಸುನೀಲ್​ ಬನ್ಸಾಲ್​ ಹೊತ್ತಿದ್ದಾರೆ ಎಂದು ಪಕ್ಷದ ಆಂತರಿಕ ಮೂಲಗಳು ತಿಳಿಸಿವೆ.
ಕಾಲ್ ​ಸೆಂಟರ್​ಗಳನ್ನು ಪ್ರಾರಂಭಿಸುವ ಕುರಿತು ಪಕ್ಷದ ಕಚೇರಿಯಲ್ಲಿ ಸಭೆ ಕರೆಯಲಾಗಿದ್ದು, ಮುಂಬರುವ ಪಂಚರಾಜ್ಯ ಹಾಗೂ ಲೋಕಸಭೆ ಚುನಾವಣೆ ಮೇಲೆ ಬಿಜೆಪಿ ನಾಯಕರು ಹೆಚ್ಚು ಕೇಂದ್ರಿಕರಿಸಿದ್ದಾರೆ ಎಂದು ಹೇಳಲಾಗಿದೆ. ಈ ನಿಟ್ಟಿನಲ್ಲಿ ಕಾಲ್ ​ಸೆಂಟರ್​ ತೆರೆಯಲು ಉದ್ದೇಶಿಸಲಾಗಿದ್ದು, ಏಕಕಾಲದಲ್ಲಿ 200ಕ್ಕೂ ಹೆಚ್ಚು ಕಡೆ ಪ್ರಾರಂಭಿಸಲು ಯೋಜನೆ ರೂಪಿಸಲಾಗಿದೆ.
ಇದನ್ನೂ ಓದಿ:ನಮ್ಮ ಸಿದ್ದಾಂತಕ್ಕೆ ವಿಶ್ವದಾದ್ಯಂತ ಹೆಚ್ಚಿನ ಬೇಡಿಕೆ ಇದೆ: ಮೋಹನ್​ ಭಾಗವತ್​
30 ರಾಜ್ಯಗಳನ್ನು ಒಳಗೊಂಡಂತೆ ಏಕಕಾಲದಲ್ಲಿ 200ಕ್ಕೂ ಹೆಚ್ಚು ಕಾಲ್​ಸೆಂಟರ್​ಗಳನ್ನು ತೆರೆಯಲು ಉದ್ಧೇಶಿಸಲಾಗಿದ್ದು, 20 ಸಾವಿರಕ್ಕೂ ಅಧಿಕ ಮಂದಿ ಕಾರ್ಯನಿರ್ವಹಿಸಲಿದ್ದಾರೆ. ದಿನದ 24 ಘಂಟೆಯೂ ಕಾಲ್​ ಸೆಂಟರ್​ ಕಾರ್ಯನಿರ್ವಹಿಸಲಿದ್ದು, ಪಕ್ಷದ ವತಿಯಿಂದ ಇದಕ್ಕಾಗಿ ವಿಶೇಷ ವರ್ಕ್​ಶಾಪ್​ ಒಂದನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾಲ್​ ಸೆಂಟರ್​ಗಳು ನವೆಂಬರ್​ 1ರಿಂದ ಆರಂಭವಾಗಲಿದ್ದು, ಪ್ರತಿ ಕೇಂದ್ರದಲ್ಲಿ 20-22ಮಂದಿ ಕೆಲಸ ಮಾಡಲಿದ್ದಾರೆ. ಈ ಕಾಲ್ ಸೆಂಟರ್‌ಗಳ ಪ್ರಮುಖ ಗುರಿ ರಾಷ್ಟ್ರೀಯ ಮಟ್ಟದಲ್ಲಿ ಮತದಾರರೊಂದಿಗೆ ಸಂಪರ್ಕ ಸಾಧಿಸುವುದು ಎಂದು ಹೇಳಲಾಗಿದೆ. 2018ರಲ್ಲೂ ಬಿಜೆಪಿ ಈ ರೀತಿಯ ಕಾರ್ಯತಂತರ ಅನುಸರಿಸಿತ್ತು.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:five + 15 =
Remember me
