ನವದೆಹಲಿ:ಅನಾರೋಗ್ಯದಿಂದ ಬಳಲುತ್ತಿರುವ ಬಿಜೆಪಿಯ ಹಿರಿಯ ನಾಯಕ ಲಾಲ್​ ಕೃಷ್ಣ ಅಡ್ವಾಣಿ ಅವರು ಮತ್ತೊಮ್ಮೆ ಇಂದು (ಜುಲೈ 04) ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಂದು ವಾರದ ಹಿಂದಷ್ಟೇ ರಾಷ್ಟ್ರ ರಾಜಧಾನಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್​) ಆಸ್ಪತ್ರೆಗೆ ದಾಖಲಾಗಿದ್ದರು.
ಪ್ರಸ್ತುತ ಅಡ್ವಾಣಿ ಅವರು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದೆ. ಅವರನ್ನು ನಿಗಾದಲ್ಲಿ ಇರಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ನರವಿಜ್ಞಾನದ ಹಿರಿಯ ಸಲಹೆಗಾರರಾದ ಡಾ. ವಿನಿತ್ ಸೂರಿ ಅವರು ವಿಶೇಷ ನಿಗಾ ವಹಿಸಿದ್ದಾರೆ. ಅಡ್ವಾಣಿಯವರ ಅನಾರೋಗ್ಯದ ವಿವರಗಳು ತಕ್ಷಣಕ್ಕೆ ತಿಳಿದುಬಂದಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ವಯೋಸಹಜ ಕಾಯಿಲೆ ಹಿನ್ನೆಲೆಯಲ್ಲಿ ಕಳೆದ ವಾರವಷ್ಟೇ 96 ವರ್ಷದ ಅಡ್ವಾಣಿ ಅವರನ್ನು ದೆಹಲಿಯ ಏಮ್ಸ್​ಗೆ ದಾಖಲಿಸಲಾಗಿತ್ತು. ಮೂತ್ರಶಾಸ್ತ್ರ ಮತ್ತು ಜೆರಿಯಾಟ್ರಿಕ್ ಮೆಡಿಸಿನ್ ಸೇರಿದಂತೆ ವಿವಿಧ ವಿಶೇಷ ವೈದ್ಯರ ತಂಡವು ಅಡ್ವಾಣಿ ಅವರನ್ನು ಪರೀಕ್ಷಿಸಿತು ಮತ್ತು ಜೂನ್ 27 ರಂದು ಡಿಸ್ಚಾರ್ಜ್ ಆಗಿದ್ದರು. ಇದೀಗ ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಮಾಜಿ ಉಪಪ್ರಧಾನಿ ಅಡ್ವಾಣಿ ಅವರಿಗೆ ಮೂರು ತಿಂಗಳ ಹಿಂದಷ್ಟೇ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯ ನಿವಾಸದಲ್ಲಿ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಪ್ರಶಸ್ತಿ ಪ್ರದಾನ ಔಪಚಾರಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್​, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಎಲ್​.ಕೆ ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.
ಎಲ್​.ಕೆ. ಅಡ್ವಾಣಿ ಅವರು 2002 ಜೂನ್ ತಿಂಗಳಿಂದ 2004 ಮೇ ತಿಂಗಳವರೆಗೆ ಭಾರತದ ಉಪ ಪ್ರಧಾನ ಮಂತ್ರಿಯಾಗಿ ಮತ್ತು 1999 ಅಕ್ಟೋಬರ್ ತಿಂಗಳಿಂದ 2004 ಮೇ ತಿಂಗಳವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು. ಅಲ್ಲದೆ, 1986 ರಿಂದ 1990, 1993 ರಿಂದ 1998 ಮತ್ತು 2004 ರಿಂದ 2005 ರವರೆಗೆ ಬಿಜೆಪಿಯ ಅಧ್ಯಕ್ಷರಾಗಿದ್ದರು.(ಏಜೆನ್ಸೀಸ್​)
ಬಿಜೆಪಿ ಹಿರಿಯ ನಾಯಕ ಎಲ್​.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

ಟೀಮ್​ ಇಂಡಿಯಾದ ಈ ಆಟಗಾರ ಕೊಹಿನೂರ್ ವಜ್ರಕ್ಕಿಂತಲೂ ಹೆಚ್ಚು! ದಿನೇಶ್​​ ಕಾರ್ತಿಕ್​ ಹೇಳಿಕೆ ವೈರಲ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
