ಹೂಗ್ಲಿ: ಪಶ್ಚಿಮಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್​ ಬೆಂಬಲಿಗರ ಗೂಂಡಾಗಿರಿ ಹೊಸದಲ್ಲ. ಅಲ್ಲಿ ರಾಜಕೀಯ ಪಕ್ಷಗಳ ನಡುವೆ ಹೊಡೆದಾಟ, ಕೊಲೆ ತೀರ ಸಾಮಾನ್ಯವೆಂಬಂತೆ ಆಗಿಬಿಟ್ಟಿದೆ. ಅದರಲ್ಲೂ ಬಿಜೆಪಿ ಮುಖಂಡರನ್ನೇ ಗುರಿಯಾಗಿಸಿ ಹಲ್ಲೆ ಮಾಡುವುದು, ಅವರನ್ನು ಹತ್ಯೆ ಮಾಡುವುದು ನಡೆಯುತ್ತಲೇ ಇರುತ್ತದೆ.
ಇದೀಗ ಹೂಗ್ಲಿ ಜಿಲ್ಲಾ ಪರಿಷತ್​​ನ ಬಿಜೆಪಿ ಸದಸ್ಯನೋರ್ವನ ಹತ್ಯೆ ಆಗಿದೆ. ಸ್ವಾತಂತ್ರ್ಯ ದಿನಾಚರಣೆ ವೇಳೆ ಧ್ವಜಾರೋಹಣ ಮಾಡುವ ವಿಚಾರಕ್ಕೆ ತೃಣಮೂಲ ಕಾಂಗ್ರೆಸ್​ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ಶುರುವಾಗಿ, ಅದರಲ್ಲಿ ಬಿಜೆಪಿಯ ಕಾರ್ಯಕರ್ತನೋರ್ವ ಮೃತಪಟ್ಟಿದ್ದಾನೆ.ಇದನ್ನೂ ಓದಿ:74ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ಭಾರತದ ಕ್ರೀಡಾಪಟುಗಳು…
ಹರೀಶ್​ಚಕ್​ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತ ಕಾರ್ಯಕರ್ತನ ಹೆಸರು ಸುಧಾಮ್​ ಪ್ರಾಮಾಣಿಕ್​ ಎಂದು ಹೇಳಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಈತನ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಸುಧಾಮ್​​ ಅವರನ್ನು ಹತ್ಯೆ ಮಾಡಿದ್ದು ತೃಣಮೂಲ ಕಾಂಗ್ರೆಸ್​ನ ಗೂಂಡಾಗಳು ಎಂದು ಬಿಜೆಪಿ ಬೆಂಬಲಿಗರು ಆರೋಪ ಮಾಡಿದ್ದಾರೆ. ಆದರೆ ಸ್ಥಳೀಯ ತೃಣಮೂಲ ಕಾಂಗ್ರೆಸ್​ ಮುಖಂಡರು ಈ ಆರೋಪವನ್ನು ಅಲ್ಲಗಳೆದಿದ್ದಾರೆ. ಬಿಜೆಪಿಯಲ್ಲೇ ಒಳಜಗಳ ನಡೆದು, ಅವರವರೇ ಹೊಡೆದಾಡಿಕೊಂಡಿದ್ದಾರೆ. ಆಗಲೇ ಸುಧಾಮ್ ಜೀವ ಹೋಗಿದೆ ಎಂದಿದ್ದಾರೆ.
ಸ್ಥಳೀಯ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಇನ್ನೂ ಯಾರನ್ನೂ ಬಂಧಿಸಿಲ್ಲ. ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ. (ಏಜೆನ್ಸೀಸ್​)
‘ಡಿಜೆ ಹಳ್ಳಿ ಗಲಭೆಕೋರರಿಗೆ ಶಿಕ್ಷೆ ಕೊಡಿಸುವುದನ್ನು ಬಿಟ್ಟು ನಮ್ಮ ಮೇಲ್ಯಾಕೆ ಆರೋಪ ಮಾಡುತ್ತೀರಿ?’-ಕಾಂಗ್ರೆಸ್​ ಕಿಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + twelve =
Remember me
