ನಾದಿಯಾ:ಪಶ್ಚಿಮಬಂಗಾಳದ ನಾದಿಯಾ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನೋರ್ವನ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬಿಜಯ್​ ಶಿಲ್​ (34) ಮರಕ್ಕೆ ನೇಣುಬಿಗಿದುಕೊಂಡಿದ್ದಾರೆ. ಇವರು ಗಯೇಶ್​ಪುರ ಸಿಟಿಯ ನಿವಾಸಿಯಾಗಿದ್ದರು. ಬಿಜೆಪಿ ಪಕ್ಷ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.  ಪೊಲೀಸರು ಶಿಲ್​ ಅವರ ಮೃತದೇಹವನ್ನು ವಶಪಡಿಸಿಕೊಂಡು ಶವಪರೀಕ್ಷೆಗೆ ಕಳಿಸಿದ್ದಾರೆ. ಇದು ಆತ್ಮಹತ್ಯೆಯಲ್ಲ. ರಾಜಕೀಯ ಗೂಂಡಾಗಳು ಸೇರಿ ಕೊಲೆ ಮಾಡಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಮೂವರು ಬಿಜೆಪಿ ಕಾರ್ಯಕರ್ತರು ಇದೇ ಮಾದರಿಯಲ್ಲಿ ಹತ್ಯೆಯಾಗಿದ್ದಾರೆ. ಅವರೆಲ್ಲರ ಸಾವಿಗೆ ನ್ಯಾಯ ಕೊಡಿಸಬೇಕು ಎಂದು ಪಶ್ಚಿಮ ಬಂಗಾಳ ಬಿಜೆಪಿ ಆಗ್ರಹಿಸಿದೆ.ಇದನ್ನೂ ಓದಿ:ಅಮೆರಿಕ ಅಧ್ಯಕ್ಷೀಯ ಚುನಾವಣೆ 2020 : ಸ್ವಿಂಗ್ ಸ್ಟೇಟ್ಸ್ ಅಂದರೇನು? ಈ ಸಲದ ಚುನಾವಣಾ ವಿಷಯಗಳೇನು?
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರ ಹತ್ಯೆ ಮೊದಲಿನಿಂದಲೂ ನಡೆಯುತ್ತಲೇ ಇದೆ. ಅಲ್ಲಿ ಆಡಳಿತರೂಢ ಸರ್ಕಾರ ಟಿಎಂಸಿ ಮತ್ತು ಬಿಜೆಪಿ ಮಧ್ಯೆ ಹೊಡೆದಾಟ, ಗಲಾಟೆಗಳು ತೀರ ಸಾಮಾನ್ಯ. ಆದರೆ ಪದೇಪದೆ ಬಿಜೆಪಿ ಕಾರ್ಯಕರ್ತರ ಹತ್ಯೆ ಆಗುತ್ತಿರುವುದು ಪಕ್ಷದ ನಾಯಕರು, ಮುಖಂಡರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅದರಲ್ಲೂ ಶವಗಳು ನೇಣುಬಿಗಿದ ಸ್ಥಿತಿಯಲ್ಲೇ ಪತ್ತೆಯಾಗುತ್ತಿವೆ.  (ಏಜೆನ್ಸೀಸ್​)
ತಮ್ಮ ಪಕ್ಷದ ಮೈತ್ರಿ ಯಾರೊಂದಿಗೆ ಎಂಬುದನ್ನು ಬಹಿರಂಗಪಡಿಸಿದ ಕಮಲಹಾಸನ್…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
