ಭೋಪಾಲ್​:ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಯಾವುದೇ ಆಂತರಿಕ ಕಲಹಗಳಿದ್ದರು ಪಕ್ಷದ ಇಮೇಜ್​ ಡ್ಯಾಮೇಜ್​ ಆಗದಂತೆ ನೋಡಿಕೊಳ್ಳಬೇಕು ಎಂದು ರಾಷ್ಟ್ರೀಯ ಪಕ್ಷಗಳ ಹೈಕಮಾಂಡ್​ ಸ್ಥಳೀಯ ನಾಯಕರಿಗೆ ಸೂಚನೆ ನೀಡಿದೆ.
ಇದೀಗ ಘಟನೆಯೊಂದರಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರಿಬ್ಬರು ಜಿಲ್ಲಾ ಘಟಕದ ಉಪಾಧ್ಯಕ್ಷನನ್ನು ಅಮಾನುಷವಾಗಿ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಘಟನೆಯೂ ಮಧ್ಯಪ್ರದೇಶದ ಉಜ್ಜಯಿನಿಯ ಮೆಹದಿಪುರ ಮಾರುಕಟ್ಟೆಯಲ್ಲಿ ನಡೆದಿದೆ. ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ಪ್ರಕರಣ ಸಂಬಂಧ ಮೂವರನ್ನು ವಶಕ್ಕೆ ಪಡೆಯಲಾಗಿದ್ದು, ಯಾವ ಕಾರಣಕ್ಕೆ ಹೊಡೆದಾಡಿಕೊಂಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಇಬ್ಬರು ಯುವಕರು ಹಲ್ಲೆಗೊಳಗಾದ ವ್ಯಕ್ತಿ ಪ್ರತಿಯೊಂದು ವಿಚಾರಕ್ಕೂ ದುಡ್ಡು ಕೇಳುತ್ತಿದ್ದ. ಶಾಸಕರನ್ನು ಭೇಟಿ ಮಾಡಿಸುವಂತೆ ಹೇಳಿದರು ಸಹ ಈತ ಹಣಕ್ಕೆ ಬೇಡಿಕೆ ಇಡುತ್ತಿದ್ದ ಎಂದು ವಿಚಾರಣೆ ವೇಳೆ ಆರೋಪಿಸಿದ್ದಾರೆ.
Ujjain | MPउज्जैन के BJYM [BJP's Youth Wing] के महिंदपुर ग्रामीण उपाध्यक्ष पल्लव पोरवाल को पार्टी कार्यकर्ताओं ने बीच बाजार जूते-चप्पलों से पीटा।पुलिस ने दोनों की हिरासत में लिया। ज़िले के महिंदपुर की घटना।pic.twitter.com/GNfnhAdR6O
ಇದನ್ನೂ ಓದಿ:ಸಂಸತ್​ ಸದಸ್ಯತ್ವದಿಂದ ಪ್ರಜ್ವಲ್​ ರೇವಣ್ಣ ಅನರ್ಹ: ರಾಜ್ಯ ಹೈಕೋರ್ಟ್​ ಆದೇಶ
ಇತ್ತ ಹಲ್ಲೆಗೊಳಗಾದ ವ್ಯಕ್ತಿ ಪಕ್ಷದೊಳಗಿನ ವಿರೋಧಿ ಬಣ ಹೆಣೆದಿರುವ ಷಡ್ಯಂತ್ರದ ಒಂದು ಭಾಗವಾಗಿದೆ. ಆದರೆ, ನಾನು ಯಾರ ಬಳಿಯೂ ಹಣ ಕೇಳಿಲ್ಲ ಈ ಬಗ್ಗೆ ದೂರು ದಾಖಲಿಸುವುದಾಗಿ ವಿಚಾರಣೆ ವೇಳೆ ಹೇಳಿದ್ಧಾರೆ. ವಿಚಾರಣೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿ ನೀಡಲಾಗುವುದು ಎಂದು ಸ್ಥಳೀಯ ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.
ಇತ್ತ ಪಕ್ಷದ ನಾಯಕರು ಸಾರ್ವಜನಿಕವಾಗಿ ಹೊಡೆದಾಡಿಕೊಂಡಿರುವ ಕುರಿತು ಆಂತರಿಕ ತನಿಖೆಗೆ ಆದೇಶಿಸಿರುವ ಬಿಜೆಪಿ ಶಿಸ್ತು ಪಾಲನಾ ಸಮಿತಿಗೆ ವಿಸ್ತೃತ ವರದಿ ಸಲ್ಲಿಸುವಂತೆ ಆದೇಶಿಸಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × 4 =
Remember me
