ನವದೆಹಲಿ:ದೇಶದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್​ ಅವರ ಜನ್ಮದಿನದಂದೇ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಮಹಿಳೆಯರು, ರೈತರು, ಬಡವರು ಹಾಗೂ ಯುವಕರ ಏಳಿಗೆಯ ಜತೆಗೆ 14 ಭರವಸೆಗಳನ್ನು ನೀಡಲಾಗಿದ್ದು, ಪ್ರಧಾನಿ ಮೋದಿ ಅವರು ನೀಡಿರುವ ಭರವಸೆ 24 ಕ್ಯಾರೆಟ್​ ಗೋಲ್ಡ್​ನಂತೆ ಪರಿಶುದ್ಧವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಬಣ್ಣಿಸಿದ್ದಾರೆ.
ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪ್ರಣಾಳಿಕೆ ಬಿಡುಗಡೆ ಬಳಿಕ ಮಾತನಾಡಿದ ರಾಜನಾಥ್​ ಸಿಂಗ್​, ಬಿಜೆಪಿ ತನ್ನ ಬದ್ಧತೆಗಳನ್ನು ಈಡೇರಿಸುವ ಮೂಲಕ ಜನರಲ್ಲಿ ವಿಶ್ವಾಸಾರ್ಹತೆಯನ್ನು ಗಳಿಸಿದೆ. ಪ್ರಣಾಳಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಭರವಸೆಗಳು 24 ಕ್ಯಾರೆಟ್​ ಗೋಲ್ಡ್​ನಂತೆ ಪರಿಶುದ್ಧವಾಗಿದೆ. ಬಿಜೆಪಿ ಬಿಡುಗಡೆ ಮಾಡಿರುವ ಸಂಕಲ್ಪ ಪತ್ರವನ್ನು ವಿಶ್ವ ರಾಜಕಾರಣದಲ್ಲಿ ಸುವರ್ಣಾಲಂಕಾರವಾಗಿ ನೋಡಲಾಗುತ್ತಿದೆ ಎಂದು ಹೇಳಿದ್ದಾರೆ.
ಮಹಿಳಾ ಮೀಸಲಾತಿ, ಆರ್ಟಿಕಲ್​ 370 ರದ್ದತಿ, ರಾಮಮಂದಿರ ನಿರ್ಮಾಣ ಸೇರಿದಂತೆ ಕೇಂದ್ರ ಬಿಜೆಪಿ ಸರ್ಕಾರವು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಈ ಹಿಂದೆ ನಾವು ಚುನಾವಣೆ ಸಮಯದಲ್ಲಿ ನೀಡಿದ್ದ ಬಹುತೇಕ ಭರವಸೆಗಳನ್ನು ಈಡೇರಿಸಿದ್ದೇವೆ. ಪ್ರಣಾಳಿಕೆ ತಯಾರಿ ವೇಳೆ ನಾವು 15 ಲಕ್ಷಕ್ಕೂ ಅಧಿಕ ಸಲಹೆಗಳನ್ನು ಸ್ವೀಕರಿಸಿದ್ದೇವೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಹೇಳಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
