ಭುವನೇಶ್ವರ್:ಪುರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಬಿತ್ ಪಾತ್ರಾ ಅವರು ಜಗನ್ನಾಥ ದೇವರ ಮೇಲೆ “ತಪ್ಪಾಗಿ” ಹೇಳಿಕೆ ನೀಡಿದ್ದಕ್ಕೆ ನನಗೆ ನೋವಾಗಿದೆ. ಇದರಿಂದಾಗಿ ಪಶ್ಚಾತ್ತಾಪದಿಂದ ಮೂರು ದಿನಗಳ ಕಾಲ ಉಪವಾಸ ಮಾಡುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ:ಮಧ್ಯಪ್ರದೇಶ: ಫ್ಲೈಓವರ್‌ನಿಂದ ಉರುಳಿ ಬಿದ್ದ ಖಾಸಗಿ ಬಸ್; ಇಬ್ಬರು ಸಾವು, 40 ಮಂದಿಗೆ ಗಾಯ
ಬಿಜೆಪಿಯ ಪುರಿ ಲೋಕಸಭಾ ಅಭ್ಯರ್ಥಿ ಸಂಬಿತ್ ಪಾತ್ರಾ ಅವರು ಭಗವಾನ್ ಜಗನ್ನಾಥನ ಕುರಿತು ತಪ್ಪಾಗಿ ಹೇಳಿಕೆ ನೀಡಿದ್ದಕ್ಕಾಗಿ ಬೇಷರತ್ ಕ್ಷಮೆ ಯಾಚಿಸಿದ್ದಾರೆ. ತಮ್ಮ ಹೇಳಿಕೆಗಳಿಂದ ವಿವಾದಕ್ಕೆ ಸಿಲುಕಿದ ನಂತರ ಸಂಬಿತ್ ಪಾತ್ರಾ ಅವರು ಮಂಗಳವಾರದಿಂದ 3 ದಿನಗಳ ಕಾಲ ಉಪವಾಸ ಮಾಡುವ ಮೂಲಕ ತಪಸ್ಸು ಮಾಡುವುದಾಗಿ ಹೇಳಿದ್ದಾರೆ.
ಈ ಕುರಿತಂತೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮಾಡಿದ ತಪ್ಪಿಗಾಗಿ ನಾನು ಭಗವಾನ್ ಜಗನ್ನಾಥನ ಪಾದಕ್ಕೇರಗಿ ಕ್ಷಮೆಯಾಚಿಸುತ್ತೇನೆ. ತಪ್ಪಿಗೆ ಪ್ರಾಯಶ್ಚಿತ ಮಾಡಿಕೊಳ್ಳಲು ಮುಂದಿನ ಮೂರು ದಿನ ಉಪವಾಸ ಇರಲಿದ್ದೇನೆ ಎಂದು ತಿಳಿಸಿದ್ದಾರೆ.
आज महाप्रभु श्री जगन्नाथ जी को लेकर मुझसे जो भूल हुई है, उस विषय को लेकर मेरा अंतर्मन अत्यंत पीड़ित है।
मैं महाप्रभु श्री जगन्नाथ जी के चरणों में शीश झुकाकर क्षमा याचना करता हूँ। अपने इस भूल सुधार और पश्चाताप के लिए अगले 3 दिन मैं उपवास पर रहूँगा।
जय जगन्नाथ। 🙏
ଆଜି ଶ୍ରୀ…pic.twitter.com/rKavOxMjIq
— Sambit Patra (Modi Ka Parivar) (@sambitswaraj)May 20, 2024

ಚುನಾವಣಾ ಪ್ರಚಾರದ ವೇಳೆ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶನ ನೀಡುತ್ತಿರುವ ವೇಳೆ ಪುರಿ ಜಗನ್ನಾಥ ದೇವರಿ ಮೋದಿ ಭಕ್ತ ಎಂದು ಸಂಬಿತ್ ಹೇಳಿಕೆ ನೀಡಿದ್ದರು. ಹೇಳಿಕೆಗೆ ವಿರೋಧ ವ್ಯಕ್ತವಾಗುತ್ತಲೇ ಬಾಯಿತಪ್ಪಿ ಹೇಳಿದ್ದಾಗಿ ಸಮಾಜಾಯಿಸಿ ನೀಡಿದ್ದರು.
ಬಿಜೆಪಿ ನಾಯಕ ಸಂಬಿತ್ ಪಾತ್ರಾ ಮಾತುಗಳು ಮಾತುಗಳು ವಿವಾದವನ್ನು ಹುಟ್ಟುಹಾಕಿತು ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ಖಂಡಿಸಿದ್ದರು. ಜಗನ್ನಾಥನನ್ನು ದೇಶದಲ್ಲಿ ರಾಜಕೀಯ ಭಾಷಣದಿಂದ ದೂರವಿಡುವಂತೆ ಬಿಜೆಪಿಗೆ ಮನವಿ ಮಾಡಿದದ್ದರು.
ಮಹಾಪ್ರಭು ಶ್ರೀ ಜಗನ್ನಾಥ ಬ್ರಹ್ಮಾಂಡದ ಪ್ರಭು. ಮಹಾಪ್ರಭುವನ್ನು ಇನ್ನೊಬ್ಬ ಮನುಷ್ಯನ ಭಕ್ತ ಎಂದು ಕರೆಯುವುದು ಭಗವಂತನಿಗೆ ಮಾಡಿದ ಅವಮಾನ. ಇದು ಸಂಪೂರ್ಣವಾಗಿ ಖಂಡನೀಯ. ಇದು ಪ್ರಪಂಚದಾದ್ಯಂತ ಇರುವ ಕೋಟ್ಯಂತರ ಜಗನ್ನಾಥ ಭಕ್ತರ ಭಾವನೆಗಳನ್ನು ಘಾಸಿಗೊಳಿಸಿದೆ ಮತ್ತು ಅವಮಾನಿಸಿದೆ ಎಂದು ನವೀನ್ ಪಟ್ನಾಯಕ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 6 =
Remember me
