ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಉತ್ತರ ಭಾಗದ ಸೋಪೋರ್ ನಗರದಲ್ಲಿನ ಗುಜರಿ ಅಂಗಡಿಯೊಂದರಲ್ಲಿ ಸೋಮವಾರ ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ:ಬಿಜೆಪಿ-ಜೆಡಿಎಸ್​ನಿಂದ ಮೈಸೂರು ಪಾದಯಾತ್ರೆ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಸಚಿವ ಜಿ. ಪರಮೇಶ್ವರ್!
ಲಡಾಖ್‌ನಿಂದ ಬಂದಿದ್ದ ಟ್ರಕ್‌ನಿಂದ ಗುಜರಿ ವಸ್ತುಗಳನ್ನು ಇಳಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಮತ್ತೊಬ್ಬ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತಪಟ್ಟವರನ್ನು ನಜೀರ್ ಅಹ್ಮದ್ ನಡ್ರೊ (40), ಅಜೀಮ್ ಅಶ್ರಫ್ ಮಿರ್ (20), ಆದಿಲ್ ರಶೀದ್ ಭಟ್ (23) ಮತ್ತು ಮೊಹಮ್ಮದ್ ಅಝಾರ್ (25) ಎಂದು ಗುರುತಿಸಲಾಗಿದೆ.  ಈ ದುರಂತ ಸಂಭವಿಸಿರುವ ಶೇರ್ ಕಾಲೋನಿಯ ನಿವಾಸಿಗಳು ಬಹುತೇಕ ಗುಜರಿ ವ್ಯಾಪಾರವನ್ನು ನಡೆಸುತ್ತಿದ್ದು, ಇದೀಗ ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿದೆ.
ಘಟನೆಯ ಸ್ವರೂಪ ಮತ್ತು ಸ್ಫೋಟಕ್ಕೆ ಕಾರಣವಾದ ಅಂಶಗಳ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ವಿಧಿವಿಜ್ಞಾನ ತಜ್ಞರ ತಂಡ ಸ್ಥಳಕ್ಕೆ ಧಾವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದು ಸ್ಥಳೀಯರು ಸುರಕ್ಷಿತವಾಗಿರುವಂತೆ ಅಧಿಕಾರಿಗಳು ಎಚ್ಚರಿಸಿದ್ದಾರೆ.
ದಿವಾಳಿತನ ಪ್ರಕ್ರಿಯೆ: ಬೈಜುಸ್ ಅರ್ಜಿ ವಿಚಾರಣೆ ಮುಂದೂಡಿಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 4 =
Remember me
