ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಜನಪ್ರಿಯ ಪ್ರವಾಸಿ ತಾಣವಾದ ದಾಲ್ ಸರೋವರದ ಹೌಸ್‌ಬೋಟ್‌ನಲ್ಲಿ ಶನಿವಾರ ಬೆಂಕಿ ಕಾಣಿಸಿಕೊಂಡಿದ್ದು, ಇದರಲ್ಲಿ 3 ವಿದೇಶಿಗರು ದಾರುಣವಾಗಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಶನಿವಾರ ಬೆಳಗಿನ ಜಾವ 5.15ಕ್ಕೆ ಸಂಭವಿಸಿದ ಈ ಅವಘಡದಲ್ಲಿ 5 ಬೋಟ್‌ಗಳು ಹಾಗೂ ಇತರೆ ಬೋಟ್‌ಹೌಸ್‌ಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಕಿ ನಂದಿಸಲು ಸ್ಥಳೀಯರು ಅಗ್ನಿಶಾಮಕ ದಳ ಮತ್ತು ತುರ್ತು ಸಿಬ್ಬಂದಿಯೊಂದಿಗೆ ಹರಸಾಹಸ ಪಟ್ಟರು. ಒಂದು ದೋಣಿಯಲ್ಲಿ ಹೀಟಿಂಗ್​ ಸಿಸ್ಟಂನ ದೋಷದಿಂದಾಗಿ ಬೆಂಕಿ ಕಾಣಿಸಿಕೊಂಡು ಇತರ ದೋಣಿಗಳಿಗೆ ವ್ಯಾಪಿಸಿದೆ ಎಂದು ತಿಳಿದುಬಂದಿದೆ.
ಸುಟ್ಟ ಬೋಟ್‌ಗಳಲ್ಲಿ ಮೂವರು ವಿದೇಶಿಯರ ಮೃತದೇಹಗಳು ಪತ್ತೆಯಾಗಿವೆ. ಅವು ಗುರುತಿಸಲಾಗದಷ್ಟು ಸುಟ್ಟು ಕರಕಲಾಗಿವೆ. ಮೃತರಲ್ಲಿ ಒಬ್ಬರು ಮಹಿಳೆಯಾಗಿದ್ದು, ಮೂವರೂ ಬಾಂಗ್ಲಾದೇಶೀಯರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಡಿಎನ್​ಎ ಪರೀಕ್ಷೆಯ ನಂತರ ಮೃತದೇಹಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷ ಏಪ್ರಿಲ್‌ನಲ್ಲಿ ದಾಲ್ ಸರೋವರದಲ್ಲಿ ಇದೇ ರೀತಿಯ ದೊಡ್ಡ ಬೆಂಕಿ ಅನಾಹುತವಾಗಿತ್ತು. ಆಗ 7 ದೋಣಿಗಳು ಸುಟ್ಟು ಭಸ್ಮವಾಗಿದ್ದವು. ಆದರೆ, ಯಾರಿಗೂ ಯಾವುದೇ ಪ್ರಾಣಹಾನಿ ಸಂಭವಿಸಿರಲಿಲ್ಲ ಎಂಬುದು ಗಮನಾರ್ಹ ಸಂಗತಿಯಾಗಿದೆ.
ದೆಹಲಿ ಜನರಿಗೆ ದೀಪಾವಳಿ ಉಡುಗೊರೆ: 8ವರ್ಷದಲ್ಲೇ ಕಡಿಮೆ ವಾಯು ಮಾಲಿನ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
