ಲಖನೌ:ಆಘಾತಕಾರಿ ಘಟನೆ ಒಂದರಲ್ಲಿ ಇಬ್ಬರು ಅಪ್ರಾಪ್ತ ವಯಸ್ಕ ಹೆಣ್ಣು ಮಕ್ಕಳ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಕಾನ್ಪುರದ ಘಟಂಪುರ ಪ್ರದೇಶದಲ್ಲಿ ನಡೆದಿದೆ.
ಬಾಲಕಿಯರ ಸಾವಿನ ಕುರಿತು ಪ್ರತಿಕ್ರಿಯಿಸಿರುವ ಕುಟುಂಬಸ್ಥರು, ಇಟ್ಟಿಗೆ ಗೂಡಿನ ಗುತ್ತಿಗೆದಾರ ಹಾಗೂ ಆತನ ಸಹಚರರು ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಸಂತ್ರಸ್ತರ ಕುಟುಂಬಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಬಿಸಿಸಿಐ ವಾರ್ಷಿಕ ಗುತ್ತಿಗೆ ಪಟ್ಟಿ ಪ್ರಕಟ; ಕನ್ನಡಿಗನಿಗೆ ಬಡ್ತಿ, ಶ್ರೇಯಸ್​-ಇಶಾನ್​ಗೆ ಕೊಕ್
ಈ ಕುರಿತು ಪ್ರತಿಕ್ರಿಯಿಸಿರುವ ಕಾನ್ಪುರ ದಕ್ಷಿಣ ವಿಭಾಗದ ಡಿಸಿಪಿ ರವೀಂದ್ರ ಕುಮಾರ್, ಪ್ರಾಥಮಿಕವಾಗಿ ಇದು ಆತ್ಮಹತ್ಯೆ ಎಂದು ತಿಳಿದು ಬಂದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಪೋಕ್ಸೋ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.
ತನಿಖೆಯನ್ನು ಚುರುಕುಗೊಳಿಸಲಾಗಿದ್ದು, ಆರೋಪಿಗಳು ಯಾರೇ ಆಗಿದ್ದರು ಅವರನ್ನು ಸುಮ್ಮನೆ ಬಿಡುವ ಮಾತಿಲ್ಲ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾನ್ಪುರ ದಕ್ಷಿಣ ವಿಭಾಗದ ಡಿಸಿಪಿ ರವೀಂದ್ರ ಕುಮಾರ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − eight =
Remember me
