ದೆಹಲಿ:ಮರದ ಪೆಟ್ಟಿಗೆಯೊಳಗೆ ಇಬ್ಬರು ಮಕ್ಕಳ ಶವ ಪತ್ತೆಯಾಗಿರುವ ಘಟನೆ ದೆಹಲಿಯ ಜಾಮಿಯಾ ಪ್ರದೇಶದಲ್ಲಿ ನಡೆದಿದೆ.
ಇದನ್ನೂ ಓದಿ: INSTAGRAMಗೂ ಬರಲಿದೆ ಕೃತಕ ಬುದ್ಧಿಮತ್ತೆ ಇರೋ ಚಾಟ್‌ಬಾಟ್‌!
ನೀರಜ್(8) ಮತ್ತು ಆರತಿ(6) ಎಂಬ ಇಬ್ಬರು ಮಕ್ಕಳ ಶವಗಳು ಪತ್ತೆಯಾಗಿದ್ದು, ಇವರು ತಮ್ಮ ತಂದೆ ಬಲ್ಬೀರ್​ ಜತೆಗೆ ವಾಸವಾಗಿದ್ದರು.
ಮೃತ ಮಕ್ಕಳು ಮಂಗಳವಾರ ಮಧ್ಯಾಹ್ನ ಊಟವಾದ ಬಳಿಕ 3.30ರ ಸುಮಾರಿಗೆ ನಾಪತ್ತೆಯಾಗಿದ್ದರು. ಕೂಡಲೇ ಪಾಲಕರು ಹಾಗೂ ನೆರೆಹೊರೆಯವರು ಮಕ್ಕಳನ್ನು ಹುಡುಕಾಡಿದ್ದಾರೆ. ಕೊನೆಗೆ, ಎಲ್ಲೂ ಕಾಣದಿದ್ದಾಗ ಮನೆಯಲ್ಲಿನ ಮರದ ಪೆಟ್ಟಿಗೆಯನ್ನು ತೆಗೆದು ನೋಡಿದಾಗ ವಿಷಯ ಬೆಳಕಿಗೆ ಬಂದಿದೆ.
ಸುದ್ದಿಯನ್ನು ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಶವಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಮಾತನಾಡಿದ ಪೊಲೀಸರು, ಮಕ್ಕಳ ದೇಹದ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ. ಇಬ್ಬರು ಆಟವಾಡುತ್ತಿದ್ದ ವೇಳೆ ಮರದ ಪೆಟ್ಟಿಗೆಯೊಳಗೆ ಆಕಸ್ಮಿಕವಾಗಿ ಸಿಕ್ಕಿಬಿದ್ದು ಉಸಿರುಗಟ್ಟಿ ಮೃತಪಟ್ಟಿರಬಹುದು ಎಂದು ಶಂಕಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
