ಪಟನಾ:ಬಿಹಾರದ ರಾಜಧಾನಿ ಪಟನಾದಲ್ಲಿರುವ ಜಯಪ್ರಕಾಶ್​ ವಿಮಾನ ನಿಲ್ದಾಣದಲ್ಲಿ ಬಾಂಬ್​ ಇಟ್ಟಿರುವುದಾಗಿ ಅನಾಮಧೇಯ ವ್ಯಕ್ತಿ ಓರ್ವ ಕರೆ ಮಾಡಿದ್ದು ಏರ್​ಪೋರ್ಟ್​ನ ಆವರಣದಲ್ಲಿ ಬಾಂಬ್​ ನಿಷ್ಕ್ರಿಯ ದಳ ಶೋಧ ಕಾರ್ಯ ನಡೆಸಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿರುವ ಬಾಂಬ್​ ನಿಷ್ಕ್ರಿಯ ದಳದ ಸದಸ್ಯರು ವಿಮಾನ ನಿಲ್ದಾಣದ ಆವರಣದಲ್ಲಿ ಬಾಂಬ್​ಗಾಗಿ ತೀವ್ರ ಶೋಧ ನಡೆಸಿದ್ದು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವನ್ನು ವಹಿಸಿದೆ.
#WATCH| Search operation underway by bomb squad team at Bihar's Patna airport after a bomb threat call was received here.pic.twitter.com/HajtWw96L5
ಇದನ್ನೂ ಓದಿ:VIDEO| ಟ್ರಾಪಿಕ್​ ಸಮಸ್ಯೆ ತಪ್ಪಿಸಲು ಮೆಟ್ರೋದಲ್ಲಿ ಪ್ರಯಾಣಿಸಿದ ನಟಿ ಹೇಮಾ ಮಾಲಿನಿ!
ಈ ಕುರಿತು ಪ್ರತಿಕ್ರಿಯಿಸಿರುವ ವಿಮಾನ ನಿಲ್ದಾಣದ ಹಿರಿಯ ಅಧಿಕಾರಿ ಒಬ್ಬರು ಬೆಳ್ಳಗೆ 10:47ರ ಸುಮಾರಿಗೆ ಅನಾಮಧೇಯ ವ್ಯಕ್ತಿ ಒಬ್ಬ ಕರೆ ಮಾಡಿ ಏರ್​ಪೋರ್ಟ್​ನಲ್ಲಿ ಬಾಂಬ್​ ಇಟ್ಟಿರುವುದಾಗಿ ಹೇಳಿ ಕರೆ ಕಟ್​ ಮಾಡಿದ್ದಾನೆ.
ನಾವು ಕೂಡಲೇ ಬಾಂಬ್​ ನಿಷ್ಕ್ರಿಯ ದಳಕ್ಕೆ ತಿಳಿಸಿದ್ದೇವೆ ಮತ್ತು ಅವರು ಕಾರ್ಯಾಚರಣೆಯನ್ನು ಮಾಡುತ್ತಿದ್ದಾರೆ. ಬೆದರಿಕೆ ಕರೆ ಹಿನ್ನಲೆಯಲ್ಲಿ ವಿಮಾನಗಳ ಸೇವೆಯಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ ಮತ್ತು ಪೊಲೀಸರು ಕರೆ ಮಾಡಿದ ಆ ವ್ಯಕ್ತಿಯನ್ನು ಹುಡುಕುತ್ತಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − six =
Remember me
