ಮಣಿಪುರ:ಬಿಜೆಪಿ ಶಾಸಕರೊಬ್ಬರ ನಿವಾಸದ ಮೇಲೆ ಗುರುವಾರ ರಾತ್ರಿ ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್ ಎಸೆದಿರುವ ಘಟನೆ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ನಡೆದಿದೆ.
ಇದನ್ನೂ ಓದಿ:ಜೀವನದಲ್ಲಿ ಅತ್ಯಂತ ಕಷ್ಟದ ಸಮಯ; ಸದ್ಯಕ್ಕೆ ಸೋಶಿಯಲ್​​ ಮೀಡಿಯಾ ಕಡೆಗೆ ಬರಲ್ಲವೆಂದ ನಟಿ​​ ಕಾಜೋಲ್​​!
ನವೋರಿಯಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಕೇಬಿ ದೇವಿಯ ಮನೆಯ ಈ ದಾಳಿ ನಡೆದಿದ್ದು, ಘಟನೆ ನಡೆದ ವೇಳೆ ಶಾಸಕರು ಮನೆಯಲ್ಲಿಯೇ ಇದ್ದರು. ಆರೋಪಿಗಳ ಕೃತ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರ ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಎರಡು ದ್ವಿಚಕ್ರ ವಾಹನಗಳಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್ ಎಸೆದಿದ್ದು, ಶಾಸಕರ ಮನೆಯ ಗೇಟ್‌ ಬಳಿ ಐಇಡಿ ಬಾಂಬ್​ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟಗೊಂಡಿದೆ. ಅದೃಷ್ಟವಶಾತ್​, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಈಶಾನ್ಯ ರಾಜ್ಯದ 13 ಜಿಲ್ಲೆಗಳಲ್ಲಿ ಸುದೀರ್ಘವಾದ ಜನಾಂಗೀಯ ಹಿಂಸಾಚಾರವು ನಡೆಯುತ್ತಿದ್ದು ವಿವಿಧ ಸಮುದಾಯಗಳ ಸುಮಾರು 37,450 ಜನರು ತಮ್ಮ ಮನೆಗಳಿಂದ ಸ್ಥಳಾಂತರಗೊಂಡು, ಸಮುದಾಯ ಭವನ ಸೇರಿದಂತೆ 272 ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆದಿದ್ದಾರೆ. ಕಳೆದ 24 ಗಂಟೆಗಳಲ್ಲಿ 27 ಶಸ್ತ್ರಾಸ್ತ್ರಗಳು ಮತ್ತು 245 ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳುವುದರ ಜತೆಗೆ ಮಣಿಪುರದ ಭದ್ರತಾ ಪಡೆಗಳು ಇದುವರೆಗೆ 896 ಅತ್ಯಾಧುನಿಕ ಮತ್ತು ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಮತ್ತು 11,763 ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 2 =
Remember me
