ಮುಂಬೈ:ಪ್ರಧಾನಿ ಮೋದಿ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ಧಾರೆ ಎನ್ನಲಾದ ಪ್ರಕರಣಕ್ಕೆ ಸಂಬಂದಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ಬಾಂಬೆ ಹೈಕೋರ್ಟ್​ ರಿಲೀಫ್​​ ನೀಡಿದೆ. ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದಕ್ಕೆ ನೀಡಿದ್ದ ವಿನಾಯ್ತಿಯನ್ನು ಕೋರ್ಟ್​ ಆಗಸ್ಟ್​ 2ರವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ.
ಬಿಜೆಪಿ ಮುಖಂಡ ಮಹೇಶ್​ ಶ್ರೀಮಲ್​ ಎಂಬುವವರು ರಫೇಲ್​ ಯುದ್ದ ವಿಮಾನ ಖರೀದಿಗೆ ಸಂಬಂಧಿಸಿದಂತೆ ರಾಹುಲ್​ ಗಾಂಧಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಕೋರ್ಟಿನಲ್ಲಿ ದಾವೆ ಹೂಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ 2021ರಲ್ಲಿ ಸ್ಥಳೀಯ ನ್ಯಾಯಾಲಯ ನೀಡಿದ್ದ, ಸಮನ್ಸ್​ ಪ್ರಶ್ನಿಸಿ ರಾಹುಲ್​ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್​.ವಿ ಕೊತ್ವಾಲ್​ ಅವರಿದ್ದ ಏಕಸದಸ್ಯ ಪೀಠವು ಪ್ರಕರಣವನ್ನು ಮುಂದೂಡಿದೆ. ಅರ್ಜಿದಾರರ ಪರ ವಕೀಲರು ಸಮಯಾವಕಾಶ ಕೇಳಿದ ಕಾರಣ ವಿಚಾರಣೆಯನ್ನು ಮುಂದೂಡಲಾಗಿದೆ.
ಇದನ್ನೂ ಓದಿ:ಧಾರ್ಮಿಕ ಕಟ್ಟುಪಾಡುಗಳನ್ನು ಮೀರಿ ಅಂಗಾಂಗ ದಾನ ಮಾಡಿದ ಮುಸ್ಲಿಂ ಕುಟುಂಬವನ್ನು ಸನ್ಮಾನಿಸಿದ ಸಚಿವ ದಿನೇಶ್​ ಗುಂಡೂರಾವ್
2021ರಲ್ಲಿ ರಾಹುಲ್​ ಗಾಂಧಿಗೆ ಖುದ್ದು ಹಾಜರಾಗುವಂತೆ ಸ್ಥಳೀಯ ನ್ಯಾಯಾಲಯವು ನೋಟಿಸ್​ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ರಾಹುಲ್​ ಗಾಂಧಿ ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದರು. ವಿಚಾರಣೆಯನ್ನು ಮುಂದುಡೂವ ವೇಳೆ ರಾಹುಲ್​ ಗಾಂಧಿ ಖುದ್ದು ಹಾಜರಾಗುವ ಅಗತ್ಯವಿಲ್ಲ ಎಂದು ಸ್ಥಳೀಯ ನ್ಯಾಯಾಲಯಕ್ಕೆ ಹೈಕೋರ್ಟ್​ ನಿರ್ದೇಶಿಸಿದೆ.
2018ರ ಸೆಪ್ಟೆಂಬರ್​ನಲ್ಲಿ ರಾಜಸ್ಥಾನದಲ್ಲಿ ನಡೆದ ಸಮಾವೇಶವೊಂದರಲ್ಲಿ ಮಾತನಾಡುವ ವೇಳೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರಧಾನಿ ಮೋದಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದರೂ ಎಂದು ಆರೋಪಿಸಿ ದೂರುದಾರರು ಸ್ಥಳೀಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
