ನವದೆಹಲಿ :ಲಡಾಖ್ ಗಡಿಯಲ್ಲಿ ಪರಿಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸದಿದ್ದರೆ ಅದು ಮತ್ತಷ್ಟು ಗಂಭೀರತೆಗೆ ಕಾರಣವಾಗಬಹುದು ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಕೋವಿಡ್-19 ಅನ್ನು ಧೈರ್ಯ, ಪ್ರಮಾಣ ಮತ್ತು ಶ್ರಮದಿಂದ ನಿಭಾಯಿಸದಿದ್ದಕ್ಕಾಗಿ ಕೇಂದ್ರದ ವಿರುದ್ಧ ಹರಿಹಾಯ್ದರು.
ಇದನ್ನೂ ಓದಿ:ಈ ವರ್ಷ ಭಾರತೀಯರಿಗಿಲ್ಲ ಹಜ್ ಯಾತ್ರೆ
ಇದೇ ಸಂದರ್ಭದಲ್ಲಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಾತನಾಡಿ ಗಡಿ ಪರಿಸ್ಥಿತಿಯನ್ನು “ಪೂರ್ಣ ಪ್ರಮಾಣದ ಬಿಕ್ಕಟ್ಟು” ಎಂದು ಬಣ್ಣಿಸಿದರು ಮತ್ತು ಪ್ರಬುದ್ಧ ರಾಜತಾಂತ್ರಿಕತೆ ಮತ್ತು ನಿರ್ಣಾಯಕ ನಾಯಕತ್ವವು ಭಾರತದ ಪ್ರಾದೇಶಿಕ ಸಮಗ್ರತೆಯನ್ನು ರಕ್ಷಿಸುವಲ್ಲಿ ಸರ್ಕಾರಕ್ಕೆ ಮಾರ್ಗದರ್ಶನ ನೀಡುತ್ತದೆ ಎಂದು ನಾವು ಭಾವಿಸುತ್ತೇವೆ ಎಂದರು.
ಇದನ್ನೂ ಓದಿ:ಗಲ್ವಾನ್ ಕಣಿವೆ ಸಂಘರ್ಷ: ಅಮೆರಿಕ ಗುಪ್ತಚರ ವರದಿ ಬಿಚ್ಚಿಟ್ಟ ರಹಸ್ಯವೇನು?
ಸೋಮವಾರ ಮನಮೋಹನ್ ಸಿಂಗ್ ಚೀನಾದ ಅತಿಕ್ರಮಣ ಕುರಿತು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು ಮತ್ತು ಚೀನಾದೊಂದಿಗಿನ ಗಡಿ ವಿವಾದದ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿದರು. ಸರ್ವಪಕ್ಷ ಸಭೆಯಲ್ಲಿ ಮೋದಿಯವರ ಹೇಳಿಕೆ ಹಾಗೂ ನಂತರ ಪ್ರಧಾನ ಮಂತ್ರಿ ಕಚೇರಿಯಿಂದ ಅವರ ಸ್ಪಷ್ಟೀಕರಣ ಬಂದ ನಂತರ ಸಿಂಗ್ ವಾಗ್ದಾಳಿ ನಡೆಸಿದ್ದರು.
ಇದನ್ನೂ ಓದಿ:ಪಾಕಿಸ್ತಾನದಲ್ಲಿ ಸಿಲುಕಿರುವ ಕಾಶ್ಮೀರಿಗಳು ಶೀಘ್ರ ತವರಿಗೆ
“ಪ್ರಧಾನಮಂತ್ರಿಯವರು ಈ ಬಿಕ್ಕಟ್ಟನ್ನು ನಿಭಾಯಿಸಲು ಮತ್ತು ಅದು ಭವಿಷ್ಯದಲ್ಲಿ ಹೆಚ್ಚಾಗದಂತೆ ತಡೆಯಲು ಸರ್ಕಾರದ ಎಲ್ಲ ಅಂಗಗಳು ಒಟ್ಟಾಗಿ ಕೆಲಸ ಮಾಡುತ್ತವೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು.ತಪ್ಪು ಮಾಹಿತಿ ನೀಡುವುದು ರಾಜತಾಂತ್ರಿಕತೆ ಅಥವಾ ನಿರ್ಣಾಯಕ ನಾಯಕತ್ವಕ್ಕೆ ಪರ್ಯಾಯವಲ್ಲ ಎಂದು ನಾವು ಸರ್ಕಾರಕ್ಕೆ ನೆನಪಿಸುತ್ತೇವೆ. ಸಮಾಧಾನಕರವಾದ, ಆದರೆ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಸತ್ಯವನ್ನು ಮರೆಮಾಚಲಾಗುವುದಿಲ್ಲ ಎಂದರು.
ನಮ್ಮವರು 40 ಸತ್ತಿಲ್ಲ ಎಂದು ಹೇಳುತ್ತಿರುವ ಚೀನಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + twelve =
Remember me
