ಮುಂಬೈ:ಬಾಲಕನೊಬ್ಬ ತಲೆ ಮೇಲೇ ಆಸ್ಪತ್ರೆಯೊಂದರ ಆಕ್ಸಿಜನ್ ಸಿಲಿಂಡರ್ ಬಿದ್ದು ಸಾವಿಗೀಡಾದ ದುರಂತವೊಂದು ಸಂಭವಿಸಿದೆ. ಮಹಾರಾಷ್ಟ್ರದಲ್ಲಿ ಈ ಪ್ರಕರಣ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಕೂಡ ವೈರಲ್ ಆಗಿದೆ.
ಅರ್ನವ್ ನಲವಾಡೆ ಎಂಬ 9 ವರ್ಷದ ಬಾಲಕ ಸಾವಿಗೀಡಾದವ. ಮಹಾರಾಷ್ಟ್ರದ ಒಸ್ಮಾನಾಬಾದ್​ನ ವಾಶಿಯಲ್ಲಿನ ಖಾಸಗಿ ಆಸ್ಪತ್ರೆ ಶ್ರೀವಿಠಲ್​ನ ಆಕ್ಸಿಜನ್​ ಸಿಲಿಂಡರ್​ ಬಿದ್ದು ಈ ಅವಘಡ ಸಂಭವಿಸಿದೆ. ಆಸ್ಪತ್ರೆ ಹೊರಗೆ ಇರಿಸಿದ್ದ ಆಕ್ಸಿಜನ್ ಸಿಲಿಂಡರ್ ಉರುಳಿದ್ದು, ಅದು ನೇರ ಈ ಬಾಲಕನ ತಲೆ ಮೇಲೇ ಬಿದ್ದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಸಂದರ್ಭದಲ್ಲಿ ಆತ ಸಾವಿಗೀಡಾಗಿದ್ದಾನೆ.
ಆಸ್ಪತ್ರೆ ಆವರಣದಲ್ಲಿ ಈ ಬಾಲಕ ಆಡುತ್ತಿದ್ದಾಗ ಈ ಘಟನೆ ನಡೆದಿದೆ. ಈ ಕುರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಪ್ರಕರಣದ ಕುರಿತಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ಶಾಲೆಯಲ್ಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಹದಿಹರೆಯದ ವಿದ್ಯಾರ್ಥಿನಿ!
ಜ. 30ರಿಂದ ಮೂರು ವಾರ ಕಾಲ ಮಾಂಸ ಮಾರಾಟ ನಿಷೇಧ, ಮಾಂಸಾಹಾರಿ ಹೋಟೆಲ್​ಗಳೂ ಕ್ಲೋಸ್; ಎಲ್ಲಿ, ಯಾಕೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
