ಕಾಸರಗೋಡು:ಆಘಾತಕಾರಿ ಪ್ರಕರಣ ಒಂದರಲ್ಲಿ ಬಾಲಕನೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದನ್ನು ನೋಡಿದ ಮಹಿಳೆಯೊಬ್ಬರು ಹೃದಯಾಘಾತದಿಂದ ಪ್ರಾಣಬಿಟ್ಟಿರುವ ಘಟನೆ ಕೇರಳದ ಕಾಸರಗೋಡಿನ ಬಂಗಾಳಂ ಹಾಲಿನ ಸೊಸೈಟಿ ಎದುರಿಗಿರುವ ಜಮಾತ್​ ವಸತಿ ಸಮುಚ್ಚಯದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ಆಲ್ಬಿನ್​ ಸೆಬಾಸ್ಟಿಯನ್​(17) ಹಾಗೂ ವಿಲಾಸಿನಿ(65) ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ನೀಲೇಶ್ವರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನೆಯೂ ಬೆಳಗಿನ ಜಾವ 5 ಘಂಟೆ ಸುಮಾರಿಗೆ ಸಂಭವಿಸಿದ್ದು, ಸೆಬಾಸ್ಟಿಯನ್​ ಅವರ ಪುತ್ರ ಆಲ್ಬಿನ್​ ಮನೆ ಪಕ್ಕದಲ್ಲೇ ಇರುವ ಕೆರೆಗೆ ಈಜಲು ತೆರಳಿದ್ದಾರೆ. ಈ ವೇಳೆ ಅವನ ತಾಯಿ, ಸಂಬಂಧಿಕರು ಹಾಗೂ ನೆರೆ ಹೊರೆಯವರು ಅಲ್ಲೇ ಉಪಸ್ಥಿತರಿದ್ದರು.
ಇದನ್ನೂ ಓದಿ:ಜಮೀರ್ ಅಹಮದ್ ಖಾನ್​ಗೆ ಹುಟ್ಟುಹಬ್ಬದ ಪ್ರಯುಕ್ತ ಬೆಳ್ಳಿ ಖಡ್ಗ ನೀಡಿದ ಅಭಿಮಾನಿಗಳು
ನೀರಿಗೆ ಇಳಿದು ಕೆಲ ಹೊತ್ತು ಕಳೆದ ಬಳಿಕ ಆಲ್ಬಿನ್​ ಆಯತಪ್ಪಿ ಕಾಣೆಯಾಗಿದ್ಧರು. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರ ಸಹಾಯದಿಂದ ಆತನ ಮೃತದೇಹವನ್ನು ಮೇಲಕ್ಕೆ ಎತ್ತಲಾಯಿತು. ಅಲ್ಲೇ ಇದ್ದ ನೆರೆಮನೆಯ ವಿಲಾಸಿನಿ ಬಾಲಕನ ಮೃತದೇಹ ನೋಡುತ್ತಿದ್ದಂತೆ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರು ಅಷ್ಟರಲ್ಲಾಗಲ್ಲೇ ಅವರು ಮೃತಪಟ್ಟಿದ್ದರು. ಸ್ಥಳಕ್ಕೆ ಭೇಟಿ ನೀಡಿದ ನೀಲೇಶ್ವರ ಪೊಲೀಸರು ಸ್ತಳ ಮಹಜರು ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
