ಲಖನೌ:ಆಘಾತಕಾರಿ ಘಟನೆಯೊಂದರಲ್ಲಿ 14 ವರ್ಷದ ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಬಳಿಕ ಆಕೆಯ ಶವವನ್ನು ನೇಣು ಹಾಕಿರುವುದು ಬೆಳಕಿಗೆ ಬಂದಿದೆ.
ಘಟನೆಯೂ ಉತ್ತರಪ್ರದೇಶದ ಲಖನೌನ ತಕ್ರೋಹಿ ಎಂಬ ಪ್ರದೇಶದಲ್ಲಿ ನಡೆದಿದ್ದು, ಆರೋಪಿಯನ್ನು ಶಾಹಿದ್​ ಎಂದು ಗುರುತಿಸಲಾಗಿದೆ. ತಲೆಮಾರಿಸಿಕೊಂಡಿರುವ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿಯೊಬ್ಬರು ಮೃತ ಬಾಲಕಿಯ ಪೋಷಕರು ಜೀವನೋಪಾಯಕ್ಕಾಗಿ ತಾವಿರುವ ಮನೆಯಿಂದ ಸ್ವಲ್ಪ ದೂರದಲ್ಲೇ ಲಾಂಡ್ರಿ ಒಂದನ್ನು ನಡೆಸುತ್ತಿದ್ದಾರೆ. ಬಾಲಕಿಯ ಪೋಷಕರ ಚಲನವಲನಗಳನ್ನು ಗಮನಿಸಿದ್ದ ಆರೋಪಿಯೂ ಗುರುವಾರ ಮಧ್ಯಾಹ್ನ 1 ರಿಂದ 1:30ರ ಸುಮಾರಿಗೆ ಆರೋಪಿ ಸಂತ್ರಸ್ತೆಯ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿ ಆಕೆಯ ಶವವನ್ನು ರೂಮಿನಲ್ಲಿದ್ದ ಫ್ಯಾನಿಗೆ ನೇಣು ಹಾಕಿದ್ದಾನೆ.
ಇದನ್ನೂ ಓದಿ:ಶೌಚಾಲಯಕ್ಕೆ ಬೀಗ ಹಾಕಿದ್ದಕ್ಕೆ ಕೋಪ; ನಶೆಯಲ್ಲಿ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ ಬಿಜೆಪಿ ನಾಯಕ
ಮೃತ ಬಾಲಕಿ ಹಾಗೂ ಆರೋಪಿ ನಡುವಿನ ಸಂಬಂಧದ ಕುರಿತು ತಿಳಿದು ಬಂದಿಲ್ಲ. ಘಟನೆಯೂ ಆಕೆಯ ತಾಯಿ ಮನೆಗೆ ಆಗಮಿಸಿದ ವೇಳೆ ಬೆಳಕಿಗೆ ಬಂದಿದ್ದು, ಈ ವೇಳೆ ಆರೋಪಿಯೂ ಬಾಲ್ಕನಿಯಲ್ಲಿ ನಿಂತಿದ್ದನ್ನು ಗಮನಿಸಿ ಹಿಡಿಯಲು ಮುಂದಾದಾಗ ಅವರನ್ನು ತಳ್ಳಿ ಎಸ್ಕೇಪ್​ ಆಗಿದ್ದಾನೆ. ಆತನ ಪತ್ತೆಗಾಗಿ ವಿಶೇಷ ತಂಡ ಒಂದನ್ನು ರಚಿಸಲಾಗಿದ್ದು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.
ಬಾಲಕಿಯ ಸಾವಿನ ಸುದ್ದಿ ಹೊರಬರುತ್ತಿದ್ದಂತೆ ತಕ್ರೋಹಿ ಪ್ರದೇಶದ ನಿವಾಸಿಗಳು ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + six =
Remember me
