ಉದಯ್​ಪುರ:ಮುಸ್ಲಿಂ ಸಹಪಾಠಿಯಿಂದ ಇರಿತಕ್ಕೊಳಗಾಘಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿ ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾನೆ.
ಮೃತ ಬಾಲಕನನ್ನು ದೇವರಾಜ್ (15)​ ಎಂದು ಗುರುತಿಸಲಾಗಿದ್ದು, ಕೊನೆಯುಸಿರೆಳೆಯುವ ಮೊದಲು ಸಹೋದರಿ ಆತನಿಗೆ ರಾಖಿ ಕಟ್ಟಿದ್ದಳು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:VIDEO| ಸನ್ಮಾನ ಸಮಾರಂಭದಲ್ಲಿ ಪ್ರಜ್ಞೆ ತಪ್ಪಿ ಬಿದ್ದ ವಿನೇಶ್​ ಪೋಗಟ್​
ಈ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿ ಅರವಿಂದ್ ಪೋಸ್ವಾಲ್, ಸೋಮವಾರ ಚಿಕಿತ್ಸೆ ವೇಳೆ ಬಾಲಕ ಮೃತಪಟ್ಟಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗುವುದು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜಿಲ್ಲಾ ಆಸ್ಪತ್ರೆಯ ಹೊರಗೆ ಭಾರೀ ಪೊಲೀಸ್ ನಿಯೋಜನೆ ಹಾಗೂ ನಗರದ ವಿವಿಧ ಭಾಗಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಆಗಸ್ಟ್​ 16ರಂದು ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಬಿಟ್ಟಿದ್ದ ಸಮಯದಲ್ಲಿ ಬಾಲಕರಿಬ್ಬರ ನಡುವೆ ಗಲಾಟೆಯಾಗಿದ್ದು, ಈ ವೇಳೆ ಮುಸ್ಲಿಂ ವಿದ್ಯಾರ್ಥಿ ತನ್ನ ಸಹಪಾಠಿಗೆ ಚಾಕುವಿನಿಂದ ತೊಡೆ ಭಾಗಕ್ಕೆ ಇರಿದಿದ್ದ. ಗಂಭಿರವಾಗಿ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದಾದ ಬಳಿಕ ಜಿಲ್ಲೆಯಲ್ಲಿ ಉಂಟಾಗಿದ್ದ ಕೋಮು ಸಂಘರ್ಷವನ್ನು ಹತ್ತೋಟಿಗೆ ತಂದಿರುವ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 16 =
Remember me
