ಲಖನೌ:ಇತ್ತೀಚೆಗೆ ಕೇವಲ ಹೆಣ್ಣು ಮಕ್ಕಳು ಮಾತ್ರವಲ್ಲ, ಪುಟ್ಟ ಪುಟ್ಟ ಗಂಡು ಮಕ್ಕಳ ಮೇಲೂ ಲೈಂಗಿಕ ದೌರ್ಜನ್ಯವಾಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ನೆರೆ ಮನೆಯಲಿದ್ದ ಬಾಲಕನನ್ನು ಪ್ರೀತಿಯಿಂದ ಅಣ್ಣಾ ಎಂದು ಕರೆಯುತ್ತಿದ್ದ 12 ವರ್ಷದ ಬಾಲಕನ ಮೇಲೇ ಲೈಂಗಿಕ ದೌರ್ಜನ್ಯವಾಗಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ.
ಇದನ್ನೂ ಓದಿ:ಪಶ್ಚಿಮ ಬಂಗಾಳದಲ್ಲಿ ಹೈ ಡ್ರಾಮ! ಟಿಎಂಸಿ ಶಾಸಕರು ಬಿಜೆಪಿ ಸೇರಿದ ಬೆನ್ನಲ್ಲೇ ಬಿಜೆಪಿ ಸಂಸದನ ಪತ್ನಿ ಟಿಎಂಸಿ ಸೇರ್ಪಡೆ!
ಆತ 12 ವರ್ಷದ ಬಾಲಕ. ಉತ್ತರ ಪ್ರದೇಶದ ನೋಯ್ಡಾದಲ್ಲಿ ತಂದೆ ತಾಯಿಯೊಂದಿಗೆ ಬದುಕುತ್ತಿದ್ದ. ಆತನ ಪಕ್ಕದ ಮನೆಯಲ್ಲಿ 16 ವರ್ಷದ ಬಾಲಕನಿದ್ದಾನೆ. ಇಬ್ಬರೂ ಒಂದೇ ಶಾಲೆಗೆ ಹೋಗುತ್ತಾರೆ. ಒಂದೇ ಬಸ್ಸಿನಲ್ಲಿ ಓಡಾಡುವ ಅವರ ಮಧ್ಯೆ ಸ್ನೇಹ ಬೆಳೆದಿದೆ. ಅದೇ ಸ್ನೇಹವನ್ನು ದುರುಪಯೋಗ ಮಾಡಿಕೊಂಡ 16 ವರ್ಷದ ಬಾಲಕ, ನೆರೆ ಮನೆಯ ಹುಡುಗನನ್ನು ಆಗಾಗ ಮನೆಗೆ ಕರೆಸಿಕೊಂದಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆತನ ಬಟ್ಟೆ ಬಿಚ್ಚಿ, ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಈ ರೀತಿಯ ಘಟನೆ ಕಳೆದ ನಾಲ್ಕು ವರ್ಷಗಳಿಂದ ನಡೆಯುತ್ತಲೇ ಬಂದಿದೆ. ಇತ್ತೀಚಿಗೆ ತನ್ನ ಮೇಲೆ ದೌರ್ಜನ್ಯವಾಗುತ್ತಿರುವುದಾಗಿ ಬಾಲಕ ಸಹಾಯವಾಣಿಯೊಂದಕ್ಕೆ ಕರೆ ಮಾಡಿ ತಿಳಿಸಿದ್ದು, ಅದರಿಂದ ವಿಚಾರ ಹೊರಬಿದ್ದಿದೆ. ಬಾಲಕನ ಪೋಷಕರು ಪೊಲೀಸರ ಮೊರೆ ಹೋಗಿದ್ದಾರೆ.
ಇದನ್ನೂ ಓದಿ:ಜೆಡಿಎಸ್ ಹುಟ್ಟಿದ್ದೇ ಜಗಳಗಳಿಂದ… ; ಶಾಸಕ ಶ್ರೀನಿವಾಸ್ ವ್ಯಂಗ್ಯ; ಅತಿ ಆತ್ಮವಿಶ್ವಾಸ ಎಚ್ಡಿಡಿ ಸೋಲಿಗೆ ಕಾರಣವೆಂದ ವಾಸು ; ಕುಮಾರಸ್ವಾಮಿ ವಿರುದ್ಧ ಹರಿಹಾಯ್ದ ಕೆಎನ್ನಾರ್
ಈ ಹಿಂದೆ 2018ರಲ್ಲಿ ಒಮ್ಮೆ ಬಾಲಕ ತನ್ನ ಮೇಲಾಗುತ್ತಿರುವ ದೌರ್ಜನ್ಯದ ಬಗ್ಗೆ ಪೋಷಕರಿಗೆ ತಿಳಿಸಿದ್ದನಂತೆ. ಏನೋ ಹುಡುಗಾಟ ಎಂದು ಭಾವಿಸಿದ ಅವರು, ಮಕ್ಕಳಿಬ್ಬರಿಗೂ ಬುದ್ಧಿ ಹೇಳಿದ್ದಾರೆ. ಅಕ್ಕ ಪಕ್ಕದಲ್ಲಿದ್ದವರು, ತಮ್ಮ ಮನೆ ಬದಲಿಸಿ, ಬೇರೆಡೆ ಮನೆ ಮಾಡಿದ್ದಾರೆ. ಆದರೂ ಬಾಲಕನ ಮೇಲೆ ನಡೆಯುತ್ತಿದ್ದ ಅನ್ಯಾಯ ಕಡಿಮೆಯಾಗಿಲ್ಲ. ಆ ಕಾರಣ ಪೋಷಕರು ಪೊಲೀಸ್​ ದೂರು ದಾಖಲಿಸಿದ್ದಾರೆ ಎನ್ನಲಾಗಿದೆ. (ಏಜೆನ್ಸೀಸ್​)
ಸೆಕ್ಸ್​ ವರ್ಕರ್​ ಇರಲಿಲ್ಲ, ಹೋಟೆಲ್​ ಸಿಬ್ಬಂದಿಯನ್ನೇ ರೇಪ್​ ಮಾಡಿಬಿಟ್ಟರು! ವಿಚಾರಣೆ ವೇಳೆ ಹೊರಬಿತ್ತು ಭಯಾನಕ ರಹಸ್ಯ!

ಮಾರ್ಕ್ಸ್​ ಬೇಕೆಂದರೆ ನನ್ನ ಜತೆ ಸೆಕ್ಸ್​ ಮಾಡಿ! ಸರ್ಕಾರಿ ಶಾಲಾ ಶಿಕ್ಷಕನ ಬೇಡಿಕೆಗೆ ಬೆಚ್ಚಿದ ವಿದ್ಯಾರ್ಥಿನಿಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − twelve =
Remember me
