ಭೋಪಾಲ್:ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ 24 ವರ್ಷದ ಯುವಕನೊಬ್ಬ, 19 ವರ್ಷದ ಯುವತಿಗೆ ಮನಬಂದಂತೆ ಥಳಸಿದ್ದಾನೆ. ಯುವತಿಯಿದ್ದಲ್ಲಿಗೆ ಏಕಾಏಕಿ ಬಂದ ಯುವಕ ನನ್ನನ್ನು ಮದುವೆಯಾಗು ಎಂದು ಹೇಳಿ ಅಮಾನುಷವಾಗಿ ಹಲ್ಲೆ ಮಾಡಿದ್ದಾನೆ ಎಂದು ವರದಿಯಾಗಿದೆ. ಯುವಕ ಥಳಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಯುವಕನ ಕೃತ್ಯಕ್ಕೆ ಎಲ್ಲೆಡೆ ಆಕ್ರೋಶ ಕೇಳಿ ಬರುತ್ತಿದೆ.
ತನ್ನನ್ನು ಮದುವೆಯಾಗು ಎಂದು ಹೇಳುತ್ತಾ, ಯುವತಿಯನ್ನು ನೆಲಕ್ಕೆ ತಳ್ಳಿ, ಕಾಲಿನಿಂದ ನಿರಂತರವಾಗಿ ಮುಖಕ್ಕೆ ಹಲ್ಲೆ ಮಾಡಿದ್ದಾನೆ. ನಂತರ ಯುವಕ ಹಾಗೂ ವಿಡಿಯೋ ಮಾಡಿದ ಆತನ ಸ್ನೇಹಿತ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ನಿರ್ಜನ ಪ್ರದೇಶದಲ್ಲಿ ಈ ಘಟನೆ ನಡೆದುದರಿಂದ ಯುವತಿ ತಾಸುಗಟ್ಟಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದಾಳೆ. ನಂತರ ರಸ್ತೆ ದಾರಿಯಲ್ಲಿ ಸಾಗುತ್ತಿದ್ದ ಸ್ಥಳೀಯ ಯುವತಿಯ ಪರಿಸ್ಥಿತಿಯನ್ನು ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
Trigger Warning-Violenceइस राक्षस को धारा 151 की खानापूर्ति करके छोड़ दिया एमपी के रीवा की पुलिस नेपरिवार अगर खूंखार के खौफ से शिकायत नहीं करवाएगा,तो क्या पुलिस इससे भी खौफनाक अगली वारदात के लिए राक्षस को आजाद छोड़ देगी बताएं क्या ये घटना 151 की हैpic.twitter.com/tHUhc838ur— Yogita Bhayana योगिता भयाना (@yogitabhayana)December 24, 2022
Trigger Warning-Violenceइस राक्षस को धारा 151 की खानापूर्ति करके छोड़ दिया एमपी के रीवा की पुलिस नेपरिवार अगर खूंखार के खौफ से शिकायत नहीं करवाएगा,तो क्या पुलिस इससे भी खौफनाक अगली वारदात के लिए राक्षस को आजाद छोड़ देगी बताएं क्या ये घटना 151 की हैpic.twitter.com/tHUhc838ur
ವಿಡಿಯೋ ವೈರಲ್ ಆಗುತ್ತಿದ್ದಂತೆ, ಪೊಲೀಸರು ಇಬ್ಬರ ವಿರುದ್ಧ ಐಟಿ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್​ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು, ತಪ್ಪಿತಸ್ಥ ಯುವಕರ ಪತ್ತೆಗೆ ಬಲೆ ಬೀಸಿದ್ದಾರೆ. ಇದೀಗ ಆರೋಪಿಗಳನ್ನು ಬಂಧಿಸಿದ್ದಾರೆ. ಯುವತಿಗೆ ಮನಬಂದಂತೆ ಹಲ್ಲೆ ಮಾಡಿದಾತ ಪಂಕಜ್ ತ್ರಿಪಾಠಿ ಎಂದು ವರದಿಯಾಗಿದೆ.
ಪಂಕಜ್ ತ್ರಿಪಾಠಿ ಸಂತ್ರಸ್ತ ಯುವತಿಯನ್ನು ಮದುವೆಯಾಗಲು ಬಯಸಿದ್ದ. ಇದಕ್ಕೆ ಯುವತಿ ಹಾಗೂ ಯುವತಿಯ ಕುಟುಂಬಸ್ಥರು ಒಪ್ಪಿಗೆ ನೀಡಿರಲಿಲ್ಲ. ಹೀಗಾಗಿ ಕೋಪಗೊಂಡ ಪಂಕಪ್ ಏಕಾಏಕಿ ಬಂದು ಯುವತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವುದಾಗಿ ವಿಚಾರಣೆಯ ವೇಳೆ ಆರೋಪಿ ತಿಳಿಸಿರುವುದಾಗಿ ರೇವಾ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಸೋಂಕರ್ ಮಾಹಿತಿ ನೀಡಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 19 =
Remember me
