ಭೋಪಾಲ್​:ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯನ್ನು ಸಂತೋಷ ಪಡಿಸಲು ಪತ್ನಿಯ ಬೆತ್ತಲೆ ವಿಡಿಯೋ ಮತ್ತು ಫೋಟೋಗಳನ್ನು ರೆಕಾರ್ಡ್​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಅಮಾನವೀಯ ಘಟನೆ ಮಧ್ಯ ಪ್ರದೇಶದ ಭೋಪಾಲ್​ನಲ್ಲಿ ನಡೆದಿದೆ.
ನರಸಿಂಗಪುರದ 28 ವರ್ಷದ ಸಂತ್ರಸ್ತೆ, ಸರ್ಕಾರಿ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾಳೆ. ಸದ್ಯ ಆಕೆ ಅರೆರಾದ ಕಾಲನಿಯೊಂದರಲ್ಲಿ ವಾಸವಿದ್ದಾಳೆ. ಆಕೆ ಹೇಳುವ ಪ್ರಕಾರ 2015ರಲ್ಲಿ ಜಬಲ್ಪುರ ಮೂಲದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ.
ಆರಂಭದಲ್ಲಿ ಸಂಸಾರದ ಬಂಡಿ ಸುಖವಾಗಿಯೇ ಸಾಗಿದೆ. ಆದರೆ, ನಂತರದ ದಿನಗಳಲ್ಲಿ ಪತಿ ಸಂತ್ರಸ್ತೆಗೆ ವರದಕ್ಷಿಣೆ ಕಿರುಕುಳ ನೀಡಲು ಆರಂಭಿಸಿದ್ದಾನೆ. ಅನೇಕ ದಿನಗಳವರೆಗೆ ದೈಹಿಕ ಹಾಗೂ ಮಾನಸಿಕವಾಗಿ ಪತಿ ಆಕೆಗೆ ಕಿರುಕುಳ ನೀಡಿದ್ದಾನಂತೆ. ಅಲ್ಲದೆ, ಪತಿ ಮನೆಯವರು ಸಹ ಕಿರುಕುಳ ನೀಡಿದ್ದಾಗಿ ಮಹಿಳೆ ಆರೋಪಿಸಿದ್ದಾಳೆ.
ಇದನ್ನೂ ಓದಿರಿ:Roberrt Twitter Review: ದರ್ಶನ್​ ಅಭಿನಯದ ರಾಬರ್ಟ್​ ಚಿತ್ರದ ಟ್ವಿಟರ್​ ವಿಮರ್ಶೆ ಹೀಗಿದೆ…
ಇಷ್ಟಕ್ಕೆ ಸುಮ್ಮನಾಗದ ಪತಿ ಮಹಾಶಯ ಸಂತ್ರಸ್ತೆಯ ಬೆತ್ತಲೆ ಫೋಟೋ ಮತ್ತು ವಿಡಿಯೋಗಳನ್ನು ರೆಕಾರ್ಡ್​ ಮಾಡಿ ವೈರಲ್​ ಮಾಡಿದ್ದಾನೆ. ಆತನಿಗೆ ಮೊದಲೇ ಮತ್ತೊಬ್ಬ ಯುವತಿ ಜತೆ ಅಕ್ರಮ ಸಂಬಂಧ ಇತ್ತಂತೆ. ಹೀಗಾಗಿ ತನ್ನ ಪತಿಯಿಂದ ವಿಚ್ಛೇದನ ಪಡೆದುಕೊಳ್ಳಲು ಮುಂದಾಗಿ ಅನೇಕ ಬಾರಿ ವಿಫಲವಾಗಿದ್ದಾನೆ.
ಅಶ್ಲೀಲ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಮಾಡಿದರೆ ಬೆದರಿಸಿ ಹೇಗಾದರೂ ವಿಚ್ಛೇದನ ಪಡೆದು ಲವರ್​​ ಜತೆ ಹೋಗಬಹುದು ಎಂಬ ದುರಾಸೆಯಿಂದ ಫೋಟೋ ಮತ್ತು ವಿಡಿಯೋಗಳನ್ನು ಜಾಲತಾಣದಲ್ಲಿ ಆರೋಪಿ ಪತಿ ಹರಿಬಿಟ್ಟಿದ್ದಾನೆ.
ಇದೀಗ ಸಂತ್ರಸ್ತೆ ಗಂಡನ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ದೈಹಿಕ ಹಾಗೂ ಮಾನಸಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದು, ದೂರು ದಾಖಲಿಸಿರುವ ಪೊಲೀಸರು ಆದಷ್ಟು ಬೇಗ ಆರೋಪಿಯನ್ನು ಬಂಧಿಸಲಾಗುವುದು ಎಂದು ಹಬೀಬ್​ಗಂಜ್​ ಠಾಣೆ ಎಸ್​ಐ ಸುನಿತಾ ಭಲೆರಾವ್​ ಹೇಳಿದ್ದಾರೆ.(ಏಜೆನ್ಸೀಸ್​)
ಮಹಿಳೆ ಮನೆಯಲ್ಲಿ ಹಲ್ಲಿ ಓಡಿಸಲು ಹೋದ ಇನ್ಸ್​ಪೆಕ್ಟರ್​ ದುರಂತ ಸಾವು: ಸಿಸಿಟಿವಿಯಲ್ಲಿ ಭಯಾನಕ ದೃಶ್ಯ!

ಮಮತಾ ಬ್ಯಾನರ್ಜಿಗೆ ಏಟು ಬಿದ್ದಿದ್ದು ಹೇಗೆ ? ಘಟನೆ ಒಂದು, ಕಥೆಗಳು ಹಲವು !

ಮತ್ತೆ ಒಂದಾದ ದಿಯಾ ಸ್ಟಾರ್ಸ್​ ಪೃಥ್ವಿ-ಖುಷಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + fifteen =
Remember me
