ನವದೆಹಲಿ:ಭಾರತಕ್ಕೆ ಆಗಮಿಸಿರುವ 15 ಮಂದಿ ಇಟಲಿ ಪ್ರವಾಸಿಗರಲ್ಲಿ ಕೊರೊನಾ ವೈರಸ್​ ಇರುವುದು ವೈದ್ಯಕೀಯ ಪರೀಕ್ಷೆಯಿಂದ ಧೃಡಪಟ್ಟಿರುವುದಾಗಿ ದೆಹಲಿಯ ಏಮ್ಸ್​ ಆಸ್ಪತ್ರೆ ಬುಧವಾರ ಖಚಿತಪಡಿಸಿದೆ.
ಎಲ್ಲ 15 ಇಟಲಿ ಪ್ರವಾಸಿಗರನ್ನು ದೆಹಲಿಯ ಚಾವ್ಲಾ ಏರಿಯದಲ್ಲಿರುವ ಇಂಡೋ-ಟಿಬೆಟನ್​ ಬಾರ್ಡರ್ ಪೊಲೀಸ್​ (ಐಟಿಬಿಪಿ) ಶಿಬಿರದಲ್ಲಿ ಬಂಧಿಸಲಾಗಿದ್ದು, ಏಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಒಟ್ಟು 21 ಮಂದಿ ಇಟಲಿ ಪ್ರವಾಸಿಗರು ಭಾರತಕ್ಕೆ ಆಗಮಿಸಿದ್ದರು. ಅದರಲ್ಲಿ 15 ಮಂದಿಗೆ ಪಾಸಿಟಿವ್​ ಕೊರೊನಾ ವೈರಸ್​ ಪತ್ತೆಯಾಗಿದೆ. ನಿನ್ನೆ ಮಧ್ಯಾಹ್ನದಿಂದ ಪ್ರತ್ಯೇಕವಾಗಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಭಾರತದಲ್ಲಿ ಒಟ್ಟು ಆರು ಮಂದಿಗೆ ಕೊರೊನಾ ವೈರಸ್​ ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಆರು ಮಂದಿಯಲ್ಲಿ ರಾಜಸ್ಥಾನದಲ್ಲಿರುವ ಇಟಾಲಿಯನ್​ ದಂಪತಿ, ಬೆಂಗಳೂರಿನ ಟೆಕ್ಕಿ ಹಾಗೂ ಇಟಲಿಯಿಂದ ಭಾರತಕ್ಕೆ ಆಗಮಿಸಿದ ಓರ್ವರು ಸೇರಿದ್ದಾರೆ.
ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ನಿನ್ನೆ ಪರಿಶೀಲನಾ ಸಭೆ ನಡೆಸಿದ ಪ್ರಧಾನಿ ಮೋದಿ ಕೊರೊನಾ ವೈರಸ್​ ಕುರಿತು ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ದೇಶದ ಜನತೆಗೆ ಧೈರ್ಯ ತುಂಬಿದ್ದಾರೆ.
ಇಟಲಿಯಿಂದ ಬಂದಿದ್ದ ದೆಹಲಿ ನಿವಾಸಿಯೊಬ್ಬರು ಆಯೋಜಿಸಿದ್ದ ಪಾರ್ಟಿಗೆ ನೋಯ್ಡಾದ ಎರಡು ಶಾಲೆಯ ಕೆಲ ವಿದ್ಯಾರ್ಥಿಗಳು ತೆರಳಿದ್ದರಿಂದ ಕೊರೊನಾ ವೈರಸ್​ ಹರಡಿದೆ ಎಂದು ಹೇಳಲಾಗಿದ್ದು, ಎರಡು ಶಾಲೆಯನ್ನು ಸದ್ಯ ಶುಚಿಗೊಳಿಸಲಾಗಿದೆ.
ಇಟಲಿಯಿಂದ ಬಂದಿದ್ದ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ಇಬ್ಬರು ಆಗ್ರಾ ವ್ಯಕ್ತಿಗಳಿಗೂ ಕೊರೊನಾ ವೈರಸ್​ ಲಕ್ಷಣಗಳಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ. ಸದ್ಯ ದೇಶದಲ್ಲೂ ಕೊರೊನಾ ವೈರಸ್​ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಎಲ್ಲೆಡೆ ತೀವ್ರ ನಿಗಾವಹಿಸಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − eight =
Remember me
