ಮಲಪ್ಪುರಂ:ಮದುವೆಗೂ ಮುನ್ನಾ ದಿನ 19 ವರ್ಷದ ಯುವತಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಕೇರಳದ ಮಲಪ್ಪುರಂನ ಪೆರಿಂಥಲಮನ್ನಾದಲ್ಲಿ ನಡೆದಿದೆ.
ಮೃತಳನ್ನು ಫಾತಿಮಾ ಬಥೂರ್​ ಎಂದು ಗುರುತಿಸಲಾಗಿದೆ. ಈಕೆ ಪಾತೈಕ್ಕರ ಶಾಲೆಪಾಡಿ ಕಿಜಕ್ಕೆತ್ತಿಲ್‌ ಮೂಲದ ಮುಸ್ತಫಾ ಮತ್ತು ಜೀನತ್ ದಂಪತಿಯ ಪುತ್ರಿ. ಫಾತಿಮಾಳ ಮದುವೆ ಇಂದು ಮೂರ್ಕ್ಕನಾಡು ಮೂಲದ ಯುವಕನೊಂದಿಗೆ ನಡೆಯಬೇಕಿತ್ತು. ಆದರೆ, ವಿಧಿ ಲಿಖಿತ ಬೇರೆ ಇತ್ತು ಅನಿಸುತ್ತದೆ. ನಿನ್ನೆ (ಜ.13) ರಾತ್ರಿ 7 ಗಂಟೆಗೆ ಕುಸಿದುಬಿದ್ದು ಮೃತಪಟ್ಟಿದ್ದಾಳೆ.
ನಿನ್ನೆ ರಾತ್ರಿ ತನ್ನ ಮನೆಯಲ್ಲಿ ನಡೆದ ಮದುವೆ ಹಿಂದಿನ ದಿನದ ಸಮಾರಂಭದಲ್ಲಿ ಫೋಟೋ ತೆಗೆಯುವ ವೇಳೆ ಕುಸಿದು ಬಿದ್ದು ಮೃತಪಟ್ಟಿದ್ದಾಳೆ. ಫಾತಿಮಾಳ ಮೃತದೇಹವನ್ನು ಇಎಂಎಸ್​ ಆಸ್ಪತ್ರೆಯ ಶವಗಾರಕ್ಕೆ ಸ್ಥಳಾಂತರ ಮಾಡಲಾಗಿದೆ. ಮಗಳನ್ನು ಕಳೆದುಕೊಂಡ ಪಾಲಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.(ಏಜೆನ್ಸೀಸ್​)
ನರೇಶ್​-ಪವಿತ್ರಾ ಲೋಕೇಶ್​ ಮದುವೆ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಟಾಲಿವುಡ್​ನ ಹಿರಿಯ ನಿರ್ಮಾಪಕ!

ಭಾರತ್​​​ ಜೋಡೋ ಯಾತ್ರೆ ವೇಳೆ ಪಂಜಾಬ್​ನ ಕಾಂಗ್ರೆಸ್​ ಸಂಸದ ನಿಧನ: ಆಸ್ಪತ್ರೆಗೆ ರಾಹುಲ್​ ಗಾಂಧಿ ದೌಡು

64ನೇ ವಯಸ್ಸಿನಲ್ಲಿ ಮೂರನೇ ಮದುವೆ! ಹಿರಿಯ ನಟಿ ಜಯಸುಧಾ ಕೊಟ್ಟ ಸ್ಪಷ್ಟನೆ ಹೀಗಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − thirteen =
Remember me
