ಭೋಪಾಲ್:ವಧುವೊಬ್ಬಳು ಮದುವೆಗೆ ಒಂದು ದಿನ ಮುಂಚಿತವಾಗಿ 6 ಮಕ್ಕಳ ತಂದೆಯೊಂದಿಗೆ ಓಡಿಹೋದ ಘಟನೆ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ನಡೆದಿದೆ.
ಬಟ್ಟೆ ಡ್ರೈ-ಕ್ಲೀನ್​​ಗೆ ಕೊಟ್ಟು ಬರುತ್ತೇನೆ ಅಂತ ಮನೆಯಿಂದ ಹೊರ ಬಂದ ಯುವತಿ ಗೆಳೆಯನೊಂದಿಗೆ ಪರಾರಿಯಾಗಿದ್ದಾಳೆ. ಮಾರ್ಚ್​ 15ರಂದು ಈ ಘಟನೆ ನಡೆದಿದೆ.
ಮನೆಯಿಂದ ಓಡಿ ಹೋಗುವಾಗ ಮನೆಯಲ್ಲಿದ್ದ ನಗದು ಹಣವನ್ನು ತೆಗೆದುಕೊಂಡು ಹೋಗಿದ್ದಾಳೆ. ಯುವತಿ ಮನೆ ಬಿಟ್ಟು ತೆರಳುವ ಮುನ್ನ ಪತ್ರವೊಂದನ್ನು ಬರೆದು ತನ್ನ ರೂಮ್​​ನಲ್ಲಿಟ್ಟಿದ್ದು, ಪತ್ರದಲ್ಲಿ ತನಗೆ ಇಷ್ಟ ಆಗಿರುವ ವ್ಯಕ್ತಿಯೊಂದಿಗೆ ಹೊರಟು ಹೋಗುತ್ತಿದ್ದಾಗಿ ಬರೆದಿದ್ದಾಳೆ ಎನ್ನಲಾಗಿದೆ. ಈಗಾಗಲೇ ಮದುವೆಯಾಗಿ 6 ಮಕ್ಕಳನ್ನು ಹೊಂದಿರುವ ವ್ಯಕ್ತಿಯೊಂದಿಗೆ ಪರಾರಿಯಾಗಿರುವುದು ಕುಟುಂಬಸ್ಥರಿಗೆ ತಿಳಿದು ಆಘಾತವಾಗಿದೆ.
ಇದನ್ನೂ ಓದಿ:ಡಿವೋರ್ಸ್ ಕೊಟ್ಟ ಪತಿ; ಮೀಸೆ, ಗಡ್ಡ ಬಿಟ್ಟು ಪುರುಷನಾದ ಮಹಿಳೆ!
ಸದ್ಯ ಯುವತಿಯ ಪೋಷಕರು ಪೊಲೀಸರ ಮೊರೆ ಹೋಗಿದ್ದು, ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ಯುವತಿಯೊಂದಿಗೆ ನಾಪತ್ತೆಯಾಗಿರುವ ವ್ಯಕ್ತಿಯ ಪತ್ನಿ ಕೂಡ ಪೊಲೀಸ್​ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ಪೊಲೀಸರು ತನಿಖೆ ಆರಂಭ ಮಾಡಿದ್ದು, ಇಬ್ಬರಿಗಾಗಿ ಹುಡುಕಾಟ ನಡೆಸಿದ್ದಾರೆ.
ಹೆರಿಗೆ ರಜೆಯಲ್ಲಿಯೇ ಪರೀಕ್ಷೆ ತಯಾರಿ ನಡೆಸಿ IPS ಅಧಿಕಾರಿಯಾದ ಐಟಿ ಉದ್ಯೋಗಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
