ತಿರುವನಂತಪುರಂ:ಮುಂಬೈನಿಂದ ಬಂದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ಇದನ್ನೂ ಓದಿ:ತಮಿಳುನಾಡು ಚುನಾವಣೆಗೆ ನಟ ದಳಪತಿ ವಿಜಯ್ ಎಂಟ್ರಿ, TVK ಪಕ್ಷದ ಧ್ವಜ ಬಿಡುಗಡೆ
ವಿಮಾನದಲ್ಲಿ 135 ಪ್ರಯಾಣಿಕರಿದ್ದರು. ವಿಮಾನವು ಬೆಳಿಗ್ಗೆ 8 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದ್ದು, ತಿಳಿಸದ ನಂತರ ಶಿಷ್ಟಾಚಾರದಂತೆ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಒಯ್ಯಲಾಗಿದೆ ಎಂದು ಅವರು ಹೇಳಿದರು.
ವಿಮಾನವು ತಿರುವನಂತಪುರಂ ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದಂತೆ ಬಾಂಬ್ ಬೆದರಿಕೆ ಇರುವುದಾಗಿ ಪೈಲಟ್‌ ಬೆಳಿಗ್ಗೆ 7.30 ಕ್ಕೆ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಳಿಗ್ಗೆ 7.36 ಕ್ಕೆ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಎಂದು ಅವರು ಹೇಳಿದರು. ಅಲ್ಲದೆ ವಿಮಾನ ನಿಲ್ದಾಣದ ಒಳಗಡೆ ಮತ್ತು ಆವರಣದಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಬಾಂಬ್ ಬೆದರಿಕೆ ಬಂದ ಮೂಲದ ಕುರಿತ ವಿವರಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ವಿಮಾನ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.
60 ವರ್ಷದ ಅರ್ಚಕನ ಜೊತೆ 20 ವರ್ಷದ ಯುವತಿ ಚಾಟಿಂಗ್: ಆನ್​ಲೈನ್​ನಲ್ಲೇ ಪೂಜಾರಿಗೆ ಲಕ್ಷ, ಲಕ್ಷ ಪಂಗನಾಮ!

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:1 × three =
Remember me
