ನವದೆಹಲಿ:ಕಾಂಗ್ರೆಸ್​​ ನಾಯಕಿ ಪ್ರಿಯಾಂಕಾ ಗಾಂಧಿಗೆ ಸವಾಲು ಹಾಕಿರುವ ಬ್ರಿಜ್ ಭೂಷಣ್, ನನ್ನ ವಿರುದ್ಧ 2024ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಚಂದ್ರಯಾನ -3 ಯಶಸ್ವಿ ಉಡಾವಣೆ ಹಿಂದಿದ್ದಾರೆ ರಾಕೇಟ್​​​ ಮಹಿಳೆ ರಿತು ಶ್ರೀವಾಸ್ತವ
ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್, ತಮ್ಮ ಟ್ವಿಟರ್​​ ಪೋಸ್ಟ್‌ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ 2024ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ವಿರುದ್ಧ ಸ್ಪರ್ಧಿಸುವಂತೆ ಹೇಳಿದ್ದಾರೆ. ಕೈಸರ್‌ಗಂಜ್ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಬ್ರಿಜ್ ಭೂಷಣ್, ಪ್ರಿಯಾಂಕಾ ಗಾಂಧಿ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ತಮ್ಮ ವಿರುದ್ಧ ಪಿತೂರಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
“ಬ್ರಿಜ್ ಭೂಷಣ್ ಅವರನ್ನು ಡಬ್ಲ್ಯುಎಫ್‌ಐ ಮುಖ್ಯಸ್ಥ ಹುದ್ದೆಯಿಂದ ಕೂಡಲೇ ಕಿತ್ತುಹಾಕಬೇಕು ಮತ್ತು ಅವರ ಬಂಧನದ ಜತೆಗೆ ನ್ಯಾಯಯುತ ತನಿಖೆ ನಡೆಸಬೇಕು” ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್​​ ಮಾಡಿದ್ದರು. ಸದ್ಯ ಈ ಟ್ವೀಟ್​​ಗೆ ತಿರುಗೇಟು ನೀಡಿರುವ ಬಿಜೆಪಿ ಸಂಸದ, “ಪ್ರಿಯಾಂಕಾ ಗಾಂಧಿಯವರ ಟ್ವೀಟ್ ದೇಶವನ್ನು ದಾರಿ ತಪ್ಪಿಸುವ ಪಿತೂರಿಯಾಗಿದೆ” ಎಂದು ಹೇಳಿದ್ದಾರೆ,(ಏಜೆನ್ಸೀಸ್).
ಬೆಕ್ಕಿನ ಮರಿ ಅಂದುಕೊಂಡು ಚಿರತೆ ಮರಿಗಳನ್ನು ಮನೆಗೆ ಕರೆತಂದ ಮಕ್ಕಳು! ಬಳಿಕ ಏನಾಯ್ತು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + eleven =
Remember me
