ಲಖನೌ:ತನ್ನ ಅಪ್ರಾಪ್ತ ವಯಸ್ಕ ಸಹೋದರಿ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದಳು ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ಜನನಿಬಿಡ ರಸ್ತೆಯಲ್ಲೇ ಆಕೆಯ ಕತ್ತು ಹಿಸುಕಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಮೀರತ್​ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಾದ ಪ್ರಶ್ನೆಗಳು ಉದ್ಭವಿಸಿದೆ.
ಘಟನೆ ಸಂಬಂಧ ಆರೋಪಿ ಹಸೀನ್​ನನ್ನು (20) ಪೊಲೀಸರು ವಶಕ್ಕೆ ಪಡೆದಿದ್ದು, ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಎಂದು ವರದಿಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
UP के मेरठ में ऑनर किलिंग का Live Video –मुस्लिम लड़की का हिन्दू लड़के से अफेयर था। वो शादी की जिद पर अड़ गई। फैमिली ने समझाया कि दोनों के धर्म अलग-अलग हैं, ये शादी नहीं हो सकती। आज भाई हसीन ने बीच सड़क पर गला दबाकर बहन को मार डाला। भीड़ तमाशा देखती रही।⚠️Disturbing Visual⚠️pic.twitter.com/e0JzZko9c7
ಇದನ್ನೂ ಓದಿ:ತೆಗೆದು ಹಾಕಿ ಇಲ್ಲವಾದಲ್ಲಿ ರಾಜೀನಾಮೆ ಕೊಡಿ; ಶ್ರೀಲಂಕಾ ವಿರುದ್ಧ ಸರಣಿ ಸೋಲಿನ ಬಳಿಕ ಗೌತಿ ವಿರುದ್ಧ ಕಿಡಿಕಾರಿದ ಫ್ಯಾನ್ಸ್​
ಈ ಕುರಿತು ಮೀರತ್​ ಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಮೃತಪಟ್ಟ ಬಾಲಕಿ ಮುಸ್ಲಿಂ ಧರ್ಮಕ್ಕೆ ಸೇರಿದವಳಾಗಿದ್ದು, ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದಳು. ಕೆಲ ದಿನಗಳ ಹಿಂದೆ ಆಕೆ ಯುವಕನ ಜೊತೆ ಪರಾರಿಯಾಗಿದ್ದಳು. ಈ ಬಗ್ಗೆ ಕುಟುಂಬಸ್ಥರು ದೂರು ದಾಖಲಿಸಿದ್ದರು. ಬಾಲಕಿ ಅಪ್ರಾಪ್ತಳಾಗಿದ್ದರಿಂದ ಪೊಲೀಸರು ಇಬ್ಬರನ್ನೂ ವಾಪಸ್ ಕರೆತಂದು ಮನೆಯವರಿಗೆ ಒಪ್ಪಿಸಲಾಗಿತ್ತು. ಸಾಮಾಜಿಕ ಕಳಂಕಕ್ಕೆ ಹೆದರಿ ಬಾಲಕಿಯ ಕುಟುಂಬಸ್ಥರು ಯುವಕನ ವಿರುದ್ಧ ದೂರು ನೀಡಿರಲಿಲ್ಲ.
ಕುಟುಂಬದವರು ಎಷ್ಟೇ ಮನವೊಲಿಸಿದರು ಒಪ್ಪದ ಬಾಲಕಿ ಗೆಳೆಯನನ್ನೇ ಮದುವೆಯಾಗುವುದಾಗಿ ಪಟ್ಟು ಹಿಡಿದಿದ್ದಳು. ಮಗಳ ವರ್ತನೆಯಿಂದ ಬೇಸತ್ತಿದ್ದ ಪೋಷಕರು ಆಕೆಯನ್ನು ಬೇರೊಬ್ಬರ ಜೊತೆ ಮದುವೆ ಮಾಡಲು ಮುಂದಾಗಿದ್ದರು. ಆದರೆ, ಆಕೆ ಮಾತ್ರ ತನ್ನ ಪ್ರಿಯಕರನನ್ನು ಬಿಟ್ಟು ಬೇರೆಯವರನ್ನು ಮದುವೆಯಾಗುವುದಿಲ್ಲ ಎಂದು ಹಠ ಹಿಡಿದಿದ್ದಳಂತೆ. ಬುಧವಾರ (ಆಗಸ್ಟ್​ 07) ಆಕೆ ಮತ್ತೆ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಲು ಮುಂದಾಗಿದ್ದಳು. ಇದನ್ನು ಅರಿತ ಸಹೋದರ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ ಎಂದು ಮೀರತ್​ ಭಾಗದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:seventeen − 4 =
Remember me
