ಕರೀಂನಗರ:ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವುಗಳು ಹೆಚ್ಚಾಗುತ್ತಿದ್ದು, ಹಠಾತ್ ಹೃದಯಾಘಾತದಿಂದ ಅನೇಕ ಜನರು ಸಾಯುತ್ತಿದ್ದಾರೆ. ಮಕ್ಕಳಿಂದ ಹಿಡಿದು ದೊಡ್ಡವರಿಗೂ ಹೃದಯಾಘಾತವಾಗುತ್ತಿದ್ದು, ಇತ್ತೀಚೆಗೆ ಇಬ್ಬರು ಸಹೋದರರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯ ರೇಣಿಕುಂಟಾದಲ್ಲಿ ನಡೆದಿದೆ.ರೇಣಿಕುಂಟಾ ಗ್ರಾಮದ ಉಮ್ಮೆಂಟಲ ಚಂದ್ರಾ ರೆಡ್ಡಿ ಮತ್ತು ಅರುಣಾ ದಂಪತಿಗಳಿಗೆ ಶ್ರೀಕಾಂತ್ ರೆಡ್ಡಿ (30) ಮತ್ತು ಮಧುಸೂದನ್ ರೆಡ್ಡಿ (26) ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. ಶ್ರೀಕಾಂತ್ ರೆಡ್ಡಿ ಕರೀಂನಗರದ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಮಧುಸೂಧನ್ ರೆಡ್ಡಿ ಹೈದರಾಬಾದ್‌ನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.ಇದನ್ನೂ ಓದಿ:ಚಲಿಸುತ್ತಿದ್ದ ರೈಲಿನ ಬಾತ್​ರೂಮ್​ ಕಮೋಡ್​ನಲ್ಲಿ ಸಿಲುಕಿದ ಮಗುವಿನ ಕಾಲು: ಮುಂದೆ ನಡೆದಿದ್ದು ಇಷ್ಟು..ಆದರೆ ಇದೇ ತಿಂಗಳ 3ರಂದು ಮಧುಸೂದನ್ ಎದೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಆಸ್ಪತ್ರೆಗೆ ದಾಖಲಾದ ಕೆಲವೇ ದಿನಗಳಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಳಿಕ ಗ್ರಾಮಕ್ಕೆ ಕರೆತಂದು ಆತನ ಅಂತಿಮ ಸಂಸ್ಕಾರ ನೆರವೇರಿಸಲಾಗಿದ್ದು, ಭಾನುವಾರದಂದು ವಿಧಿವಿಧಾನಗಳ ವ್ಯವಸ್ಥೆಗಳ ಮೇಲ್ವಿಚಾರಣೆ ನಡೆಸುತ್ತಿದ್ದ ಶ್ರೀಕಾಂತ್ ರೆಡ್ಡಿ ಕೂಡ ಇದೇ ವೇಳೆ ಭಾನುವಾರ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ.
ಕೂಡಲೇ ಆತನನ್ನು ಕರೀಂನಗರದ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ಪರೀಕ್ಷೆ ನಡೆಸಿದ ಬಳಿಕ ನಿಮ್ಸ್ ಆಸ್ಪತ್ರೆಗೆ ಶಿಫಾರಸು ಮಾಡಿದ್ದಾರೆ. ಬಳಿಕ ಅಲ್ಲಿನ ವೈದ್ಯರು ಯುವಕನಿಗೆ ಆಪರೇಷನ್ ಮಾಡಿದ್ದು, ಆತನ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಾಣದ ಕಾರಣ ಬುಧವಾರ ಸಂಜೆ ಕೊನೆಯುಸಿರೆಳೆದಿದ್ದಾನೆ. ಕೆಲವೇ ದಿನಗಳಲ್ಲಿ ಇಬ್ಬರು ಗಂಡು ಮಕ್ಕಳನ್ನು ಕಳೆದುಕೊಂಡ ಪೋಷಕರು ಕಣ್ಣೀರಿಟ್ಟಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
