ಕಾನ್ಫುರ:ಕ್ರಿಕೆಟ್​ ಆಡುವ ವೇಳೆ ತನ್ನನ್ನು ಔಟ್​ ಮಾಡಿದ ಎಂಬ ಕಾರಣಕ್ಕೆ ಸಹೋದರರಿಬ್ಬರು 14 ವರ್ಷದ ಬಾಲಕನನ್ನು ಹೊಡೆದು ಕೊಂದಿರುವ ಘಟನೆ ಉತ್ತರಪ್ರದೇಶದ ಕಾನ್ಫುರದಲ್ಲಿ ನಡೆದಿದೆ.
ಘಟನೆಯೂ ಕಾನ್ಫುರ ಜಿಲ್ಲೆಯ ಘಟಂಪುರದ ರಹತಿಡೇರಾ ಗ್ರಾಮದಲ್ಲಿ ನಡೆದಿದ್ದು, ಪ್ರಕರಣದ ಪ್ರಮುಖ ಆರೋಪಿ ಹಾಗೂ ಆತನ ಸಹೋದರ ಪರಾರಿಯಾಗಿದ್ಧಾರೆ. ‘
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪೊಲಿಸ್​ ಅಧಿಕಾರಿಯೊಬ್ಬರು ಮೃತ ಬಾಲಕ ಹಾಗೂ ಆರೋಪಿಗಳು ಕ್ರಿಕೆಟ್​ ಆಡುವ ಸಮಯದಲ್ಲಿ ಔಟ್​ ಮಾಡಿದ ಎಂಬ ಕಾರಣಕ್ಕೆ ಮೊದಲಿಗೆ ಜಗಳ ಶುರುವಾಗಿದೆ. ಈ ವೇಳೆ ಆರೋಪಿಯೂ ತಾನು ಬೇರೆ ಬ್ಯಾಟ್ಸ್​ಮನ್​ಗೆ ಕ್ರೀಸ್​ ಬಿಟ್ಟುಕೊಡುವುದಿಲ್ಲ ಎಂದು ಹಠ ಹಿಡಿದಿದ್ಧಾನೆ.
ಈ ವೇಳೆ ಔಟ್​ ಆದ 17 ವರ್ಷದವನಿಗೂ ಹಾಗೂ 14ರ ಬಾಲಕನ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಎದುರಾಳಿಯ ಮೇಲೆ ಹಲ್ಲೆ ನಡೆಸಲಾಗಿದೆ. 17 ವರ್ಷದವ ಹಲ್ಲೆ ನಡೆಸುವ ವೇಳೆ ಆತನ ಸಹೋದರನು ಕೂಡಿಕೊಂಡಿದ್ದು, ಇಬ್ಬರು ಸೇರಿಕೊಂಡು 14ರ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ಧಾನೆ.
ಇದನ್ನೂ ಓದಿ:ಕೌಟುಂಬಿಕ ಕಲಹ; ಲೈವ್​ಬ್ಯಾಂಡ್​ ಮಾಲೀಕ ಆತ್ಮಹತ್ಯೆ
ಗಾಯಾಳು ಬಾಲಕನನ್ನು ಕಂಡ ಸ್ಥಳೀಯರು ಕೂಡಲೇ ಆತನನ್ನು ಆಸ್ಪತ್ರೆಗೆ ಸೇರಿಸಿ ಪೋಷಕರಿಗೆ ಮಾಹಿತಿ ಮುಟ್ಟಿಸಿದ್ದಾರೆ. ತೀವ್ರ ರಕ್ತಸ್ರಾವ ಆಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಹಲ್ಲೆಗೊಳಗಾಗಿದ್ದ, ಬಾಲಕ ಮೃತಪಟ್ಟಿದ್ದಾನೆ. ವಿಚಾರ ತಿಳದು ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ಮರಣೊತ್ತರ ಪರೀಕ್ಷೆಗೆ ಕಳುಹಿಸಲು ಮುಂದಾಗಿದ್ದಾರೆ.
ಇದಕ್ಕೊಪ್ಪದ ಬಾಲಕನ ಪೋಷಕರು ಹಾಗೂ ಸಂಬಂಧಿಕರು ಆರೋಪಿಗಳನ್ನು ಬಂಧಿಸುವವರೆಗೂ ಮರಣೊತ್ತರ ಪರೀಕ್ಷೆ ನಡೆಸುವಂತಿಲ್ಲ ಮತ್ತು ಅಂತ್ಯೆಕ್ರಿಯೆ ಮಾಡುವುದಿಲ್ಲ ಎಂದು ಆಸ್ಪತ್ರೆ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸರು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಕುಟುಂಬಸ್ಥರ ಮನವೊಲಿಸಿದ ಬಳಿಕ ಬಾಲಕನ ಮೃತದೇಹವನ್ನು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 19 =
Remember me
