ನವದೆಹಲಿ:ಈ ಹಿಂದೆ ದೆಹಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ವಶದಲ್ಲಿರುವ ಬಿಆರ್​ಎಸ್​ ನಾಯಕಿ ಕೆ. ಕವಿತಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಯ ಡಿಡಿಯು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ದೆಹಲಿಯ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕವಿತಾ ತಿಹಾರ್​ ಜೈಲಿನಲ್ಲಿದ್ದಾರೆ. ಅವರನ್ನು ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕವಿತಾ ಅವರನ್ನು ಈ ವರ್ಷ ಮಾರ್ಚ್ 15 ರಂದು ಬಂಧಿಸಲಾಗಿತ್ತು. ಇದಾದ ಒಂದು ವಾರದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರನ್ನು ಬಂಧಿಸಲಾಗಿತ್ತು.
ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್​ ಅವರ ಪುತ್ರಿ ಕವಿತಾ ಅನುಕೂಲಕರ ಮದ್ಯ ನೀತಿಯನ್ನು ರೂಪಿಸಿದ್ದಕ್ಕಾಗಿ ಎಎಪಿಗೆ ₹100 ಕೋಟಿ ಮೊತ್ತದ ಕಿಕ್‌ಬ್ಯಾಕ್ ನೀಡಿದ ಗುಂಪಿನ ಭಾಗವಾಗಿ ಕೆ ಕವಿತಾ ಆರೋಪ ಎದುರಿಸುತ್ತಿದ್ದಾರೆ. ಇದೇ ಪ್ರಕರಣಕ್ಕೆ ದೆಹಲಿ ಡಿಸಿಎಂ ಮನೀಶ್​ ಸಿಸೋಡಿಯಾ ಕೂಡ ಜೈಲಿನಲ್ಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 2 =
Remember me
