ಹೈದರಾಬಾದ್​:ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ತೆಲಂಗಾಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅಡಳಿತರೂಢ ಭಾರತ ರಾಷ್ಟ್ರ ಸಮಿತಿ(BRS) ಪಕ್ಷದಲ್ಲಿ ತುಸು ಹೆಚ್ಚು ಎಂದು ಹೇಳಬಹುದು.
ಪಕ್ಷದಲ್ಲಿ ದಿನದಿಂದ ದಿನಕ್ಕೆ ಟಿಕೆಟ್​ ಆಕಾಂಕ್ಷಿಗಳ ನಡುವೆ ಪೈಪೋಟಿ ಹೆಚ್ಚಾಗುತ್ತಿದ್ದು, ಖಮ್ಮಂ ಜಿಲ್ಲೆಯ ವೈರಾ ವಿಧಾನಸಭೆ ಕ್ಷೇತ್ರದಲ್ಲಿ ಮಾಜಿ ಹಾಗೂ ಹಾಲಿ ಶಾಸಕರ ನಡುವಿನ ಕಿತ್ತಾಟ ತೀವ್ರ ಸ್ವರೂಪ ಪಡೆದುಕೊಂಡಿದೆ.
ವೈರಾ ವಿಧಾನಸಭಾ ಕ್ಷೇತ್ರದ ಟಿಕೆಟ್​ ಮತ್ತೊಮ್ಮೆ ತಮಗೆ ಸಿಗಲಿದ್ದು, ಯಾರು ತಮ್ಮ ಗೆಲುವಿಗೆ ಅಡ್ಡಿಪಡಿಸಲು ಸಾಧ್ಯವಿಲ್ಲ ಎಂದು ಹಾಲಿ ಶಾಸಕ ರಾಮುಲು ನಾಯಕ್​ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇತ್ತ ಮಾಜಿ ಶಾಸಕರಾದ ಮದನ್​ಲಾಲ್​ ಮತ್ತು ಬಾನೋತ್​ ಚಂದ್ರವತಿ ಕೂಡ ಈ ಬಾರಿ ಟಿಕೆಟ್​ ತಮಗೆ ಸಿಗಲಿದ್ದು, ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಆರಂಭಿಸುವಂತೆ ತಮ್ಮ ಬೆಂಬಲಿಗರಿಗೆ ಸೂಚಿಸಿದ್ದಾರೆ.
ಇದನ್ನೂ ಓದಿ:ಇನ್ಮುಂದೆ ಇಂದಿರಾ ಕ್ಯಾಂಟಿನ್​ನಲ್ಲಿ ಊಟ ದುಬಾರಿ; ದರ ಹೆಚ್ಚಳಕ್ಕೆ ಸಂಪುಟ ಸಭೆಯಲ್ಲಿ ನಿರ್ಧಾರ
ಆದರೆ, ಮಹತ್ವದ ಬೆಳವಣಿಗೆಯೊಂದರಲ್ಲಿ ಪ್ರಮುಖ ಟಿಕೆಟ್​ ಆಕಾಂಕ್ಷಿ ಮದನ್​ಲಾಲ್​ ಮಹಿಳೆಯೊಂದಿಗೆ ಇರುವ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಮಾಡಲಾಗಿದೆ. ಇಂತಹ ವ್ಯಕ್ತಿಗಳಿಗೆ ಯಾವುದೇ ಕಾರಣಕ್ಕೂ ಟಿಕೆಟ್​ ಕೊಡಬಾರದು ಎಂದು ಪ್ರತಿಸ್ಪರ್ಧಿಗಳು ಹೈಕಮಾಂಡ್​ಗೆ ಆಗ್ರಹಿಸಿದ್ದಾರೆ.
ಇತ್ತ ವೈರಲ್​​ ಆಗಿರುವ ಫೋಟೋ-ವಿಡಿಯೋ ಕುರಿತು ಪ್ರತಿಕ್ರಿಯಿಸಿರುವ ಮದನ್​ಲಾಲ್​ ಬೆಂಬಲಿಗರು ಪಕ್ಷದ ಟಿಕೆಟ್ ಎಲ್ಲಿ ತಮ್ಮ ಕೈತಪ್ಪುತ್ತದೆ ಎಂಬ ಭೀತಿಯಿಂದ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ. ಮದನ್​ಲಾಲ್​ ಅವರಿಗೆ ಈಗಾಗಲೇ ಬಿಆರ್​ಎಸ್​ ನಾಯಕರು ವೈರಾ ವಿಧಾನಸಭಾ ಕ್ಷೇತ್ರದ ಟಿಕೆಟ್​ ಖಾತ್ರಿಪಡಿಸಿದ್ದು, ಎದುರಾಳಿ ಬಣದವರು ಫೋಟೋಗಳನ್ನು ಮಾರ್ಫ್ ಮಾಡಿ ಅವರ ತೇಜೋವಧೆ ನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + fourteen =
Remember me
