ಶ್ರೀನಗರ:ಭಾರತದ ಗಡಿಯಲ್ಲಿ ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಗಡಿ ಭದ್ರತಾ ಪಡೆ (BSF)ನ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ಜಮ್ಮು-ಕಾಶ್ಮೀರದ ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್​ನಲ್ಲಿ ನಡೆದಿದೆ.
ಗಡಿ ಬಳಿ ಇರುವ ಚೆಕ್​ ಪೋಸ್ಟ್​ಗಳನ್ನು ಗುರಿಯಾಗಿಸಿ ಪಾಕಿಸ್ತಾನ ದಾಳಿ ನಡೆಸಿದ್ದು, 24 ದಿನಗಳ ಅಂತರದಲ್ಲಿ ಇದು ಮೂರನೇ ದಾಳಿಯಾಗಿದೆ. ಗಾಯಗೊಂಡಿದ್ದ ಯೋಧನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಖಲಾಸೀ ಹಾಡಿಗೆ ಮಸ್ತ್​ ಸ್ಟೆಪ್ಸ್​ ಹಾಕಿದ ವೃದ್ದೆ; ವಿಡಿಯೋ ವೈರಲ್
ಈ ಕುರಿತು ಪ್ರಕಟಣೆ ಒಂದನ್ನು ಹೊರಡಿಸಿರುವ ಬಿಎಸ್​ಎಫ್​, ಮಧ್ಯರಾತ್ರಿ 12:20ರ ಸುಮಾರಿಗೆ ಪಾಕಿಸ್ತಾನ ರೇಂಜರ್ಸ್​ ಕಡೆಯಿಂದ ಗುಂಡು ಹಾಗೂ ಶೆಲ್​ ದಾಳಿ ಪ್ರಾರಂಭವಾಯಿತು. ಪಾಕಿಸ್ತಾನದ ಈ ಅಪ್ರಚೋದಿತ ದಾಳಿಗೆ ಬಿಎಸ್​ಎಫ್​ ಯೋಧರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಗುಂಡು ಹಾಗೂ ಶೆಲ್​ ದಾಳಿಯಿಂದಾಗಿ ಗಡಿ ಅಂಚಿನಲ್ಲಿರುವ ಗ್ರಾಮದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ ಎಂದು ತಿಳಿಸಿದೆ.
ಅಕ್ಟೋಬರ್​ 17 ಹಾಗೂ 28ರಂದು ಭಾರತೀಯ ಸೇನೆಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಮೂವರು ಬಿಎಸ್​ಎಫ್​ ಯೋಧರು ಹಾಗೂ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
