ಮಧ್ಯಪ್ರದೇಶ:ಮಧ್ಯಪ್ರದೇಶದ ಬೇತುಲ್ ಲೋಕಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಭ್ಯರ್ಥಿ ಅಶೋಕ್ ಭಾಲವಿ ಮಂಗಳವಾರ ನಿಧನರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಶೋಕ್​ ಭಾಲವಿ ಮೃತ.  ಮಧ್ಯಪ್ರದೇಶದ ಬೇತುಲ್​ ಕ್ಷೇತ್ರದಿಂದ ಮಾಯಾವತಿಯವರ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ಅಶೋಕ್​ ಭಾಲವಿ ಈ ಬಾರಿಯ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದರು. ಆದರೆ ಹೃದಯಾಘಾತಕ್ಕೆ ಅಶೋಕ್​ ನಿಧನರಾಗಿದ್ದಾರೆ. ಭಾಲವಿ ಅವರ ನಿಧನದಿಂದಾಗಿ ಈ ಹಿಂದೆ ಏಪ್ರಿಲ್ 26 ರಂದು ಎರಡನೇ ಹಂತದಲ್ಲಿ ನಡೆಯಬೇಕಿದ್ದ ಕ್ಷೇತ್ರದ ಚುನಾವಣೆಯನ್ನು 1951ರ ಸೆಕ್ಷನ್​ 52ರ ಅಡಿಯಲ್ಲಿ ಮುಂದೂಡಲಾಗಿದೆ.
ಅಶೋಕ್ ಭಾಲವಿ ಸಾವಿನ ಬಗ್ಗೆ ಚುನಾವಣಾ ಆಯೋಗಕ್ಕೆ ಮಾಹಿತಿ ರವಾನಿಸಲಾಗಿದ್ದು, ಅದರ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನರೇಂದ್ರ ಕುಮಾರ್ ಸುರ್ವ್ಯವಂಶಿ ತಿಳಿಸಿದ್ದಾರೆ.
ಅಶೋಕ್​​ ಭಾಲವಿಯವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೈದ್ಯರು ಅಶೋಕ್​ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದರು ಎಂದು ತಿಳಿಸಿದೆ.
.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 2 =
Remember me
