ಶಿವಮೊಗ್ಗ:ವೀರಶೈವ ಸಮಾಜ ಒಡೆಯಲು ಯತ್ನಿಸಿದ್ದಕ್ಕೆ ಜನರು ಪಾಠ ಕಲಿಸಿದ್ದರು‌‌. ಕಾಂಗ್ರೆಸ್ ನವರಿಗೆ ಸೋಲಿನ ಸುಳಿವು ಸಿಕ್ಕಿದೆ‌ ಹೀಗಾಗಿ ಮನಬಂದಂತೆ ಮಾತನಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ಮಾಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಲಿಂಗಾಯತರ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕ್ಷುಲ್ಲಕವಾಗಿ ಮಾತನಾಡಿದ್ದಾರೆ. ಕಾಂಗ್ರೆಸ್​ನವರಿಗೆ ಸೋಲಿನ ಸುಳಿವು ಸಿಕ್ಕಿದೆ‌ ಹೀಗಾಗಿ ಮನಬಂದಂತೆ ಮಾತನಾಡುತ್ತಾರೆ ಎಂದು ಕಾಂಗ್ರೆಸ್​​ ವಿರುದ್ಧವಾಗಿ ಕಿಡಿಕಾರಿದ್ದಾರೆ.
ಇದನ್ನೂ ಓದಿ:ವಿಮಾನಕ್ಕೆ ಹಕ್ಕಿ ಡಿಕ್ಕಿ; ಬೆಂಕಿ ಕೆನ್ನಾಲಿಗೆಯಲ್ಲಿ ಹೊತ್ತಿ ಉರಿದ ಎಂಜಿನ್!​​ಕಳೆದ ಚುನಾವಣೆಯಲ್ಲಿ ವೀರಶೈವ ಸಮಾಜ ಒಡೆಯಲು ಯತ್ನಿಸಿದ್ದಕ್ಕೆ ಜನರು ಪಾಠ ಕಲಿಸಿದ್ದರು‌‌. ಆದರೂ ಕಾಂಗ್ರೆಸ್ ನಾಯಕರಿಗೆ ಬುದ್ದಿ ಬಂದಿಲ್ಲ. ಈ ಬಾರಿಯೂ ಜನರು ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಪಾಠ ಕಲಿಸಲಿದ್ದಾರೆ. ರಾಹುಲ್ ಗಾಂಧಿಗೆ ವೀರಶೈವ ಧರ್ಮದ ಬಗ್ಗೆ ಏನೂ ಗೊತ್ತಿಲ್ಲ. ಸುಮ್ಮನೇ ಇಲ್ಲಿಗೆ ಬಂದು ಹೇಳಿಕೆ ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
“ಒಬ್ಬರ ಶಿಫ್ಟ್ ರಾತ್ರಿಯಾದರೆ ಇನ್ನೊಬ್ಬರದ್ದು ಬೆಳಗ್ಗೆ, ಮದುವೆ ಮುರಿಯುವ ಮುನ್ನ ಜತೆಗಿರಲು ಪ್ರಯತ್ನಿಸಿ” ಎಂದ ನ್ಯಾಯಾಲಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 2 =
Remember me
