ನವದೆಹಲಿ:ಪ್ರಸಕ್ತ 2023-24ನೇ ಸಾಲಿನ ಕೇಂದ್ರ ಬಜೆಟ್​ನಲ್ಲಿ ಕೇಂದ್ರ ಸರ್ಕಾರವು ರೈಲ್ವೆ ಇಲಾಖೆಗೆ ಬಂಪರ್​ ಕೊಡುಗೆಯನ್ನು ಘೋಷಣೆ ಮಾಡಿದೆ.
ರೈಲ್ವೆ ಇಲಾಖೆಗೆ ಬರೋಬ್ಬರಿ 2.40 ಲಕ್ಷ ಕೋಟಿ ರೂಪಾಯಿ ಅನುದಾನವನ್ನು ಹಂಚಿಕೆ ಮಾಡಲಾಗಿದೆ. 2013-14ನೇ ಸಾಲಿನಲ್ಲಿ ಹಂಚಿಕೆ ಮಾಡಲಾದ ಅನುದಾನಕ್ಕಿಂತ 9 ಪಟ್ಟು ಹೆಚ್ಚು ಅನುದಾನವನ್ನು ಈ ಸಾಲಿನ ಬಜೆಟ್​ನಲ್ಲಿ ಕೇಂದ್ರ ಸರ್ಕಾರ ಮೀಸಲು ಇಟ್ಟಿದೆ.
ಭಾರತದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಅತಿದೊಡ್ಡ ಅನುದಾನ ಹಂಚಿಕೆಯಾಗಿದೆ. ಅಲ್ಲದೆ, ರೈಲ್ವೆ ಇಲಾಖೆಗೆ ಸಾಲ ಸೌಲಭ್ಯವು ಸಹ ಇನ್ನು ಒಂದು ವರ್ಷ ಮುಂದುವರಿಯಲಿದೆ. ಈ ವರ್ಷದ ರೈಲ್ವೆ ಬಜೆಟ್ ಅಪೂರ್ಣ ರೈಲ್ವೆ ಯೋಜನೆಗಳ ಪೂರ್ಣಗೊಳಿಸುವಿಕೆ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುವ ನಿರೀಕ್ಷೆಯಿದೆ.
100 ನಿರ್ಣಾಯಕ ಸಾರಿಗೆ ಮೂಲಸೌಕರ್ಯ ಯೋಜನೆಗಳಿಗೆ ಇದೇ ಸಂದರ್ಭದಲ್ಲಿ 75,000 ಕೋಟಿ ರೂ.ಗಳನ್ನು ಘೋಷಿಸಿದರು. ಇದು ರೈಲ್ವೆಗಳಿಗೆ ನಿರ್ದಿಷ್ಟವಾಗಿ ಅದರ ಸರಕು ವ್ಯಾಪಾರದೊಂದಿಗೆ ಸಹಾಯ ಮಾಡುವ ಸಾಧ್ಯತೆಯಿದೆ. ಅಲ್ಲದೆ, ಶೀಘ್ರವೇ ಹೈಸ್ಪೀಡ್ ರೈಲುಗಳ ಸಂಚಾರಕ್ಕೆ ಒತ್ತು ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್​ ಅವರು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 10ನೇ ಪೂರ್ಣ ಪ್ರಮಾಣದ ಬಜೆಟ್​ ಇದಾಗಿದ್ದು, ವಿತ್ತ ಸಚಿವೆಯಾಗಿ ನಿರ್ಮಲಾ ಸೀತಾರಾಮನ್​ ಅವರು ಮಂಡಿಸುತ್ತಿರುವ 5ನೇ ಬಜೆಟ್​ ಆಗಿದೆ. ಈ ಬಾರಿಯು ಸೂಟ್​ಕೇಸ್ ಸಂಪ್ರದಾಯವಿಲ್ಲ ಮತ್ತು ಮುದ್ರಣದ ಪ್ರತಿಗಳು ಇರುವುದಿಲ್ಲ. ಕಳೆದ ಬಾರಿಯಂತೆ ಇ ಬಜೆಟ್ ಮಂಡನೆಯಾಗುತ್ತಿದೆ.(ಏಜೆನ್ಸೀಸ್​)
ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ ಬಟೆಟ್​ನಲ್ಲಿ ಅನುದಾನ ಘೋಷಣೆ: 5,630 ಕೋಟಿ ರೂ. ಮೀಸಲು

LIVE| ಕೇಂದ್ರ ಬಜೆಟ್ 2023: ತಜ್ಞರ ಚರ್ಚೆ-ವಿಶ್ಲೇಷಣೆ ಜತೆಗೆ ಕ್ಷಣ ಕ್ಷಣದ ಮಾಹಿತಿಯ ನೇರಪ್ರಸಾರ

ಪ್ರಸ್ತುತ ಕೇಂದ್ರ ಬಜೆಟ್​ನ​ 7 ಆದ್ಯತೆಗಳನ್ನು ಪಟ್ಟಿ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 14 =
Remember me
