ನವದೆಹಲಿ:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​​ ಇಂದು ಮಧ್ಯಂತರ ಬಜೆಟ್​ ಮಂಡನೆ ಮಾಡಿದ್ದಾರೆ. ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಮಹ್ವವನ್ನು ನೀಡಲಾಗಿದೆ.
ದೇಶೀಯ ಪ್ರವಾಸೋದ್ಯಮದ ಉತ್ಸಾಹವನ್ನು ಹೆಚ್ಚಿಸಲು ಲಕ್ಷದ್ವೀಪ ಸೇರಿದಂತೆ ಹಲವು ದ್ವೀಪಗಳಲ್ಲಿ ಬಂದರು ಸಂಪರ್ಕ, ಮೂಲಸೌಕರ್ಯ ಯೋಜನೆಗಳನ್ನು ಆರಂಭಿಸಲಾಗುವುದು ಎಂದು ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್‌ ತಮ್ಮ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ಲಕ್ಷದ್ವೀಪ ಸೇರಿದಂತೆ ಭಾರತದ ದ್ವೀಪಗಳಲ್ಲಿ ಬಂದರು ಸಂಪರ್ಕ, ಸೌಕರ್ಯಗಳಿಗೆ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ರಾಜ್ಯಗಳಿಗೆ 50 ವರ್ಷಗಳವರೆಗೆ 75,000 ಕೋಟಿ ರೂಪಾಯಿ ದೀರ್ಘಕಾಲೀನ ಬಡ್ಡಿರಹಿತ ಸಾಲ ನೀಡಲಾಗುತ್ತಿದೆ.
ಪ್ರವಾಸಿತಾಣಗಳ ಅಭಿವೃದ್ಧಿಗೆ ರಾಜ್ಯಗಳಿಗೆ ಹಾಗೂ ದ್ವೀಪ ಪ್ರದೇಶಗಳಲ್ಲಿ ಬಂದರು ಸಂಪರ್ಕ ಮತ್ತು ಪ್ರವಾಸೋಧ್ಯ ಅಭಿವೃದ್ಧಿ, ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರ ಹಣ ವ್ಯವಸ್ಥೆ ಮಾಡಲಿದೆ. ಚೀನಾದತ್ತ ವಾಲುತ್ತಿರುವ ಮಾಲ್ಡೀವ್ಸ್‌ಗೆ ತಿರುಗೇಟು ಎಂಬಂತೆ ಕೇಂದ್ರ ಸರ್ಕಾರ ತನ್ನ ಬಜೆಟ್‌ನಲ್ಲಿ ಲಕ್ಷದ್ವೀಪವನ್ನು  ಅಭಿವೃದ್ಧಿ ಮಾಡುವುದಾಗಿ ಘೋಷಣೆ ಮಾಡಿದೆ.
2 ಕೋಟಿ ಹೆಚ್ಚುವರಿ ಮನೆ ನಿರ್ಮಾಣ: ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಪ್ರಯೋಜನ ವಿಸ್ತರಣೆ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
