ಲಖನೌ: ಜೀವಂತವಾಗಿ ಹೂಳಲ್ಪಟ್ಟಿದ್ದ ನವಜಾತ ಶಿಶುವನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಸಿದ್ಧಾರ್ಥ ನಗರ ಜಿಲ್ಲೆಯ ಸೋನಾರ್​ ಗ್ರಾಮದಲ್ಲಿ ಅಪರಿಚಿತರು ನವಜಾತ ಗಂಡು ಶಿಶುವನ್ನು ನೆಲದಲ್ಲಿ ಹೂಳಿದ್ದರು. ಹೊಲದಲ್ಲಿ ಕೆಲಸ ಮಾಡುವ ವೇಳೆ ರೈತ ಮಗುವನ್ನು ನೋಡಿ ಗ್ರಾಮಸ್ಥರಿಗೆ ಮಾಹಿತಿ ನೀಡಿದರು. ಗ್ರಾಮಸ್ಥರು ಮಗುವನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಗು ಪ್ರಜ್ಞಾಹೀನವಾಗಿದೆ.
ಇದನ್ನೂ ಓದಿಮಾವಿನ ಹಣ್ಣಿನಿಂದ ಕರೊನಾ ಬರೋದಿಲ್ಲ; ನಾರಾಯಣಗೌಡ
ಸೋನಾರ್​ ಗ್ರಾಮದಲ್ಲಿ ರೈತ ಮನೋಜ್​ ಎಂಬುವವರು ಟ್ಟ್ಯಾಕ್ಟರ್​ನಲ್ಲಿ ಹೊಲ ಉಳುಮೆ ಮಾಡುತ್ತಿದ್ದರು. ಈ ವೇಳೆ ಅಲ್ಲಿ ಮಣ್ಣಿನ ಗುಡ್ಡೆ ಕಾಣಿಸಿತು. ಗುಡ್ಡೆಯಲ್ಲಿ ಮಗುವಿನ ಕೈಬೆರಳುಗಳು ಕೂಡ ಕಾಣಿಸುತ್ತಿದ್ದವು. ಕೂಡಲೇ ಮನೋಜ್​ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಮಗುವನ್ನು ಜೀವಂತವಾಗಿ ಹೂಳಿರುವುದು ತಿಳಿಯಿತು. ಕೂಡಲೇ ಅವರು ಗ್ರಾಮಸ್ಥರ ನೆರವಿನಿಂದ ಮಗುವನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದರು.
ಮಗುವಿನ ಹೊಕ್ಕಳ ಬಳ್ಳಿ ಹಾಗೆ ಇರುವುದು ಪತ್ತೆಯಾಗಿದೆ. ಪೊಲೀಸರು ಕೇಸು ದಾಖಲಿಸಿದ್ದಾರೆ.(ಏಜೆನ್ಸೀಸ್​)
ಜೂನ್​ 1ರಂದು ಕೇರಳಕ್ಕೆ ಮುಂಗಾರು ಪ್ರವೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 13 =
Remember me
