ನವದೆಹಲಿ:ಡಿಸೆಂಬರ್​ 13ರಂದು ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಒಟ್ಟು 6 ಮಂದಿ ಆರೋಪಿಗಳನ್ನು ಈವರೆಗೂ ಬಂಧಿಸಲಾಗಿದ್ದು, ಎಲ್ಲರನ್ನೂ ಏಳು ದಿನಗಳ ಪೊಲೀಸ್​ ಕಸ್ಟಡಿಗೆ ನೀಡಲಾಗಿದ್ದು, ತನಿಖೆ ಮುಂದುವರಿದಿದೆ. ಇದರ ನಡುವೆ ಮತ್ತೊಂದು ವಿಚಾರ ಬೆಳಕಿಗೆ ಬಂದಿದೆ.
ದೆಹಲಿ ಪೊಲೀಸ್ ಇಲಾಖೆಯ ವಿಶೇಷ ಘಟಕ ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಭದ್ರತಾ ಲೋಪ ಎಸಗಿದ ಇಬ್ಬರು ಕಿಡಿಗೇಡಿಗಳ ಬಳಿ ಸಂಸದ ಪ್ರತಾಪ್​ ಸಿಂಹ ಹೆಸರಿನಲ್ಲಿ ಪಾಸ್​ ಇದ್ದಿದ್ದರಿಂದ ಅವರನ್ನೂ ಸಹ ತನಿಖೆ ಮಾಡುವ ಸಾಧ್ಯತೆ ಇದೆ.
ಇಂದು (ಡಿ.17) ಬೆಳಗ್ಗೆ ಪೊಲೀಸರು, ಆರೋಪಿಗಳಿಗೆ ಸಂಬಂಧಿಸಿದ ಸುಟ್ಟ ಸ್ಥಿತಿಯಲ್ಲಿದ್ದ ಮೊಬೈಲ್​ ಫೋನ್​ಗಳ ಬಿಡಿ ಭಾಗಗಳು, ಬಟ್ಟೆಗಳು ಮತ್ತು ಶೂಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಲ್ಲ ಫೋನ್​ಗಳು ಕೂಡ ಪ್ರಕರಣದ ಮಾಸ್ಟರ್​ ಮೈಂಡ್​ ಲಲಿತ್​ ಝಾ ಬಳಿ ಇತ್ತು ಎಂದು ತಿಳಿದುಬಂದಿದೆ. ಎಲ್ಲ ಫೋನ್​ಗಳನ್ನು ಮುರಿದು ಹಾಕಿದ ಬಳಿಕ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾನೆ. ಎಲ್ಲವೂ ರಾಜಸ್ಥಾನದಲ್ಲಿ ಪತ್ತೆಯಾಗಿವೆ.
ಸರ್ಕಾರಕ್ಕೆ ತಮ್ಮ ಸಂದೇಶ ರವಾನಿಸಲು, ಆಡಳಿತದ ಮೇಲೆ ಪ್ರಭಾವ ಬೀರುವ ಕೆಲವು ಮಾರ್ಗಗಳ ಬಗ್ಗೆ ಐವರು ಆರೋಪಿಗಳು ಚರ್ಚೆ ನಡೆಸಿದ್ದರು. ತಮ್ಮ ದೇಹವನ್ನು ಅಗ್ನಿಶಾಮಕ ಜೆಲ್​ನಿಂದ ಲೇಪಿಸಿಕೊಂಡು ಸದನದಲ್ಲೇ ಬೆಂಕಿ ಹಚ್ಚಿಕೊಳ್ಳುವ ಬಗ್ಗೆ ಯೋಜನೆ ರೂಪಿಸಿದ್ದರು. ಆದರೆ ಭದ್ರತಾ ಕಾರಣ ಮತ್ತು ಹಣದ ಕೊರತೆಯಿಂದ ಇದು ಅಸಾಧ್ಯ ಎಂಬ ಕಾರಣಕ್ಕೆ ಕೈಬಿಟ್ಟಿದ್ದರು. ಸಂಸತ್ತಿನ ಒಳಗೆ ಕರಪತ್ರಗಳನ್ನು ಹಂಚುವ ಬಗ್ಗೆಯೂ ಅವರು ಯೋಚಿಸಿದ್ದರು. ಆದರೆ ಅಂತಿಮವಾಗಿ ಅವರು ಕಲರ್ ಸ್ಪ್ರೇ ಮಾಡುವ ನಿರ್ಧಾರ ಕೈಕೊಂಡಿದ್ದರು.
ನಿರುದ್ಯೋಗ, ಬೆಲೆ ಏರಿಕೆ ಕಾರಣ ಎಂದ ರಾಹುಲ್: ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ನಿರುದ್ಯೋಗ ಮತ್ತು ಬೆಲೆ ಏರಿಕೆ ಪ್ರಮುಖ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಹೇಳಿದ್ದಾರೆ. ಮಾಧ್ಯಮದ ಜತೆ ಮಾತನಾಡಿದ ಅವರು, ಪ್ರಧಾನಿ ಮೋದಿಯವರ ನೀತಿಗಳಿಂದಾಗಿ ಯುವಕರು ಸಂಸತ್ತಿನ ಭದ್ರತೆಯನ್ನು ಉಲ್ಲಂಘಿಸಿದ್ದಾರೆ. ಈ ಉಲ್ಲಂಘನೆಯು ಜನರ ದೀರ್ಘಕಾಲದ ಅಸಹನೆಯಿಂದ ಸಂಭವಿಸಿದೆ. ದೇಶದೆಲ್ಲೆಡೆ ನಿರುದ್ಯೋಗ ಬಹುದೊಡ್ಡ ಸಮಸ್ಯೆಯಾಗಿದೆ. ಮೋದಿಯವರ ನೀತಿಗಳಿಂದ ದೇಶದ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ.
ಬಿಜೆಪಿ ತಿರುಗೇಟು: ಭಾರತದಲ್ಲಿ ನಿರುದ್ಯೋಗ ಪ್ರಮಾಣವು ಶೇ. 3.2ರಷ್ಟಿದೆ. ಇದು ಕಳೆದ ಆರು ವರ್ಷಗಳಲ್ಲಿ ಅತ್ಯಂತ ಕಡಿಮೆ ಮಟ್ಟವಾಗಿದೆ. ರಾಹುಲ್ ಗಾಂಧಿ ಆರೋಪ ಹಾಸ್ಯಮಯವಾಗಿದೆ. ಸಂಸತ್ತಿನ ಭದ್ರತೆ ಉಲ್ಲಂಘನೆ ಆರೋಪಿಗಳ ಜತೆ ಕಾಂಗ್ರೆಸ್ ಹೊಂದಿರುವ ನಿಕಟ ಸಂಪರ್ಕವನ್ನು ಅವರು ವಿವರಿಸಬೇಕು. ಆರೋಪಿಗಳಿಗೆ ಕಾನೂನು ನೆರವು ನೀಡುವುದಾಗಿ ಅಸಿಮ್ ಸರೋದೆ ಹೇಳಿದ್ದಾರೆ. ಅವರು ರಾಹುಲ್ ಗಾಂಧಿ ಜತೆ ಭಾರತ್ ಜೋಡೋ ಯಾತ್ರೆ ವೇಳೆ ಕಾಣಿಸಿಕೊಂಡಿದ್ದರು. ಅಸಿಮ್ ಸರೋದೆ ಅವರೊಂದಿಗಿನ ಸಂಬಂಧವನ್ನು ರಾಹುಲ್ ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಐಟಿ ವಿಭಾಗದ ಉಸ್ತುವಾರಿ ಅಮಿತ್ ಮಾಳವಿಯಾ ಹೇಳಿದ್ದಾರೆ.
ಸಂಸತ್ತಿನ ಸಂಕೀರ್ಣದಲ್ಲಿ ಭದ್ರತೆಯ ವಿವಿಧ ಅಂಶಗಳನ್ನು ಪರಿಶೀಲಿಸಲು ಉನ್ನತ ಅಧಿಕಾರ ಸಮಿತಿ ರಚನೆ ಮಾಡಲಾಗಿದೆ. ಡಿ. 13ರ ಘಟನೆ ಪುನರಾವರ್ತನೆಯಾಗದಂತೆ ಖಚಿತಪಡಿಸಿಕೊಳ್ಳಲು ಕ್ರಿಯಾ ಯೋಜನೆಯನ್ನು ರೂಪಿಸಲಾಗುತ್ತಿದೆ. ಉನ್ನತ ಮಟ್ಟದ ತನಿಖಾ ಸಮಿತಿಯ ವರದಿಯನ್ನು ಸದ್ಯದಲ್ಲೇ ಸಂಸತ್​ನಲ್ಲಿ ಹಂಚಿಕೊಳ್ಳಲಾಗುತ್ತದೆ ಎಂದು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ.
ನಡೆದಿದ್ದೇನು?ನಿನ್ನೆ (ಡಿ.13) ಲೋಕಸಭಾ ಕಲಾಪದ ಶೂನ್ಯ ವೇಳೆಯಲ್ಲಿ ಆರೋಪಿ ಸಾಗರ್ ಶರ್ಮಾ, ಸಂದರ್ಶಕರ ಗ್ಯಾಲರಿಯಿಂದ ಚೇಂಬರ್‌ಗೆ ಜಿಗಿದ ಆಘಾತಕಾರಿ ದೃಶ್ಯಗಳಿಗೆ ಸಾಕ್ಷಿಯಾಯಿತು. ಹಳದಿ ಹೊಗೆ ಹೊರಸೂಸುವ ಡಬ್ಬಿಯನ್ನು ತೆರೆದು ಸ್ಪೀಕರ್ ಕುರ್ಚಿಯನ್ನು ತಲುಪುವ ಪ್ರಯತ್ನದಲ್ಲಿ ಸಾಗರ್​ ಶರ್ಮ ಡೆಸ್ಕ್‌ನಿಂದ ಡೆಸ್ಕ್‌ಗೆ ಜಿಗಿದರು. ಆದರೆ, ಕೆಲ ಸಂಸದರು ಆತನನ್ನು ಹಿಡಿದು ಹಿಗ್ಗಾಮುಗ್ಗಾ ಥಳಿಸುತ್ತಿದ್ದಂತೆ, ಅಲ್ಲಿಯೇ ಇದ್ದ ಮನೋರಂಜನ್ ಕೂಡ ಹೊಗೆ ಡಬ್ಬಿ ತೆರೆದು ಓಡಲು ಆರಂಭಿಸಿದರು. ಆದರೆ, ಆತನನ್ನು ಕೂಡ ಶೀಘ್ರದಲ್ಲೇ ವಶಕ್ಕೆ ಪಡೆಯಲಾಯಿತು. ಲೋಕಸಭೆಯ ಒಳಗೆ ನಡೆದ ಈ ಆಘಾತಕಾರಿ ಘಟನೆಗೂ ಮುನ್ನ ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಸಂಸತ್ತಿನ ಹೊರಗೆ ಹೊಗೆ ಡಬ್ಬಿಗಳನ್ನು ಸಿಡಿಸಿದರು ಮತ್ತು “ಸರ್ವಾಧಿಕಾರ”ದ ವಿರುದ್ಧ ಘೋಷಣೆಗಳನ್ನು ಕೂಗಿದರು.(ಏಜೆನ್ಸೀಸ್​)
ಇಂಜಿನಿಯರ್​, ಡ್ರೈವರ್​, ಸೇನಾ ಆಕಾಂಕ್ಷಿ: ವಿಚಾರಣೆ ವೇಳೆ ಆರೋಪಿಗಳು ಬಿಚ್ಚಿಟ್ಟ ಸ್ಫೋಟಕ ಮಾಹಿತಿ ಇಲ್ಲಿದೆ…

ಸ್ವಯಂ ದಹನಕ್ಕೆ ಯೋಜನೆ!; ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಅಚ್ಚರಿ ತಿರುವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + eleven =
Remember me
