ಕೊಲ್ಕತ್ತ:ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ಬಳಿ ಮೂರು ರೈಲುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಾಯಗೊಂಡಿದ್ದ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್​ ಶನಿವಾರ ಅಪಘಾತಕ್ಕೀಡಾಗಿದೆ.
ಪಶ್ಚಿಮ ಬಂಗಾಳದ ಮೇದಿನಿಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ಬಸ್​ ಹಾಗೂ ಪಿಕ್​ಅಪ್​ ವ್ಯಾನ್​ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇದನ್ನೂ ಓದಿ:ಆಟವಾಡುತ್ತಿದ್ದ ವೇಳೆ ಬೋರ್​ವೆಲ್​ ಒಳಗೆ ಬಿದ್ದ ಬಾಲಕಿ; ಮುಂದುವರಿದ ರಕ್ಷಣಾ ಕಾರ್ಯಾಚರಣೆ
ಗಾಯಾಳುಗಳನ್ನು ಹೊತ್ತೊಯ್ಯುತ್ತಿದ್ದ ಬಸ್​ ಹಾಗೂ ಪಿಕ್​ಅಪ್​ ವ್ಯಾನ್ ನಡುವೆ ಅಪಘಾತ ಸಂಭವಿಸಿದ ಕಾರಣ ಮೇದಿನಿಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳೀಯರ ಸಹಾಯದೊಂದಿಗೆ ಸಂಚಾರ ದಟ್ಟಣೆ ನಿವಾರಿಸಿ ಗಾಯಾಳುಗಳನ್ನು ಪಶ್ಚಿಮ ಬಂಗಾಳದಲ್ಲಿರುವ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 5 =
Remember me
