ತೆಲಂಗಾಣ:ತೆಲಂಗಾಣದ ಮಹೆಬೂಬ್‌ನಗರ ಜಿಲ್ಲೆಯ ಜಡ್‌ಚಾರ್ಲಾ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ರಸ್ತೆ ಸಾರಿಗೆ ಸಂಸ್ಥೆ (ಆರ್‌ಟಿಸಿ) ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕ್ಷಣಮಾತ್ರದಲ್ಲಿ ಬಸ್‌ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಪಘಾತದಲ್ಲಿ ಕನಿಷ್ಠ ಹದಿನೈದು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಸಮಾಜದ ಸಂಘಟನೆಗೆ ಆದ್ಯತೆ ನೀಡಿ
ಆಂಧ್ರಪ್ರದೇಶಕ್ಕೆ ಸೇರಿದ ಆರ್‌ಟಿಸಿ ಬಸ್ ಹೈದರಾಬಾದ್‌ನಿಂದ ಧರ್ಮಾವರಂಗೆ ತೆರಳುತ್ತಿತ್ತು. ಜಡ್ಚಾರ್ಲ ಹೊರವಲಯ ಬೂರಡ್ಡಿಪಲ್ಲಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಟ್ರಕ್‌ಗೆ ಡಿಕ್ಕಿಯಾದ ತಕ್ಷಣ ಬಸ್​ನಲ್ಲಿ ಅಗ್ನಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿಯುವ ಮುನ್ನ ಪ್ರಯಾಣಿಕರು ಬಸ್​ ಇಳಿದು ತಮ್ಮ ತಮ್ಮ ಜೀವ ಉಳಿಸಿಕೊಂಡಿದ್ದಾರೆ.
ಅಪಘಾತದ ವೇಳೆ ಬಸ್​ನಲ್ಲಿ 36 ಮಂದಿ ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ. ಗಾಯಾಳುಗಳನ್ನು ಜಡಚರ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಹಬೂಬನಗರ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ,(ಏಜೆನ್ಸೀಸ್)
ಉತ್ತರ ಅಮೆರಿಕಾದಲ್ಲಿಯೂ ‘ಕಲ್ಕಿ’ ಅಬ್ಬರ! ಮತ್ತೊಂದು ಮೈಲಿಗಲ್ಲು ತಲುಪಿದ ಪ್ರಭಾಸ್​ ಚಿತ್ರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − three =
Remember me
