ಉತ್ತರ ಪ್ರದೇಶ:ಮದುವೆಗೆ ಅತಿಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಹೈ-ಟೆನ್ಷನ್ ತಂತಿಯ ಸ್ಪರ್ಶದಿಂದ ಬೆಂಕಿ ಹೊತ್ತಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಕ್ಷಣಮಾತ್ರದಲ್ಲಿ ಧಗಧಗನೆ ಹೊತ್ತಿಹುರಿದ ಪರಿಣಾಮ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಹಲವರು ಸುಟ್ಟ ಗಾಯಗಳಿಂದ ಗಂಭೀರ ಸ್ಥಿತಿಯಲ್ಲಿದ್ದಾರೆ. ಸದ್ಯ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ. ಘಟನೆ ಉತ್ತರಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:“ಇವರು ತಮ್ಮ ಆಟವನ್ನು ಬದಲಿಸಬೇಕಿದೆ”: ಟೀಂ ಇಂಡಿಯಾ ಆಟಗಾರನಿಗೆ ಆಸ್ಟ್ರೇಲಿಯಾ ಮಾಜಿ ಸ್ಟಾರ್ ಸಲಹೆ!
ದುರಂತ ಘಟನೆಯ ವಿವರ: ಮದುವೆ ಸಮಾರಂಭಕ್ಕೆಂದು 38 ಮಂದಿಯನ್ನು ಹೊತ್ತೊಯ್ದ ಬಸ್​, ಮೌವಿನಿಂದ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಪ್ರತ್ಯಕ್ಷದರ್ಶಿಗಳು ಹೇಳುವ ಪ್ರಕಾರ, ಬಸ್‌ಗೆ ಬೆಂಕಿ ಹೊತ್ತಿಕೊಂಡಾಗ ಒಳಗಿದ್ದವರನ್ನು ರಕ್ಷಿಸಲು ಸುಲಭವಾಗಲಿಲ್ಲ. ಕ್ಷಿಪ್ರ ರಕ್ಷಣಾ ಪ್ರಯತ್ನಗಳ ಹೊರತಾಗಿಯೂ, ಬೆಂಕಿಯು ವ್ಯಾಪಕವಾಗಿ ಆವರಿಸಿಕೊಂಡ ಕಾರಣ ಇಡೀ ವಾಹನ ಕೆಲವೇ ಸಮಯದಲ್ಲಿ ಸುಟ್ಟು ಕರಕಲಾಯಿತು ಎಂದಿದ್ದಾರೆ.
“ಅಪಘಾತಕ್ಕೆ ನಿಖರವಾದ ಕಾರಣ ತನಿಖೆಯಲ್ಲಿದೆ, ಬೆಂಕಿಗೆ ಕಾರಣವಾಗುವ ಘಟನೆಗಳ ಅನುಕ್ರಮವನ್ನು ನಿರ್ಧರಿಸಲು ಮೊಬೈಲ್ ಫೋರೆನ್ಸಿಕ್ ತಂಡವನ್ನು ಸ್ಥಳಕ್ಕೆ ನಿಯೋಜಿಸಲಾಗಿದೆ” ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಆರ್ಯಕ ಅಖೌರಿ ಹೇಳಿದರು. ಇನ್ನು ಘಟನೆ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ಪ್ರತಿಕ್ರಿಯಿಸಿದ ಸಿಎಂ ಯೋಗಿ ಆದಿತ್ಯನಾಥ್, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ತಕ್ಷಣದ ವೈದ್ಯಕೀಯ ನೆರವು ನೀಡಲು ಆದೇಶಿಸಿದರು.
ಇದನ್ನೂ ಓದಿ:ಟಿ20 ವಿಶ್ವಕಪ್‌ಗಿಲ್ಲ ಶಮಿ, ರಾಹುಲ್, ಪಂತ್ ಬಗ್ಗೆ ಅಪ್ಡೇಟ್ ನೀಡಿದ ಜಯ್ ಷಾ
ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ ಯೋಗಿ, ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 50,000 ರೂ. ಪರಿಹಾರ ಹಣವನ್ನು ಘೋಷಿಸಿದ್ದಾರೆ,(ಏಜೆನ್ಸೀಸ್).
1.4 ಕೋಟಿ ರೂ. ಮೌಲ್ಯದ ಫ್ಲ್ಯಾಟ್‌, ಅಂಗಡಿಗಳಲ್ಲಿ ಹೂಡಿಕೆ….ವಿಶ್ವದ ಶ್ರೀಮಂತ ಭಿಕ್ಷುಕ ಈತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 3 =
Remember me
