ಜೈಪುರ:ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಪ್ರಯಾಣಿಕರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಅಜ್ಮೇರ್​ನಲ್ಲಿ ನಡೆದಿದೆ.
ಘಟನೆಯು ಅಜ್ಮೇರ್​ ಜಿಲ್ಲೆಯ ನಾಸಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಜ್‌ಗಢ್​ ಪ್ರದೇಶದಲ್ಲಿ ನಡೆಯುತ್ತಿರುವ ಭೈರು ಬಾಬಾ ಜಾತ್ರೆಯಲ್ಲಿ ನಡೆದಿದೆ. ಬ್ರೇಕ್​ ಫೇಲ್ಯೂರ್​ನಿಂದ ದುರ್ಘಟನೆ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
VIDEO | Three killed after a bus ran over devotees coming to Bhairav Dham Rajgarh in Rajasthan's Nasirabad earlier today.pic.twitter.com/CQnbtuMEdK
ಇದನ್ನೂ ಓದಿ:ಕರ್ನಾಟಕಕ್ಕೂ ಕಾಲಿಟ್ಟ ಕರೊನಾ ರೂಪಾಂತರಿ; 35 ಮಂದಿಯಲ್ಲಿ JN.1 ವೈರಸ್ ಪತ್ತೆ
ಘಟನೆ ಕುರಿತು ಪ್ರತಿಕ್ರಿಯಿಸಿರುವ ನಾಸಿರಾಬಾದ್​ ಪೊಲೀಸ್​ ಠಾಣಾಧಿಕಾರಿ ರೋಷನ್​ ಲಾಲ್, ಬೈರು ಬಾಬಾ ಜಾತ್ರೆ ನಡೆಯುತ್ತಿದ್ದ ಕೂಗಳತೆ ದೂರದಲ್ಲಿ ಈ ಘಟನೆ ನಡೆದಿದ್ದು, ಬಸ್​ ನಿರ್ಗಮಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಬಸ್​ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜೆಎಲ್​ಎನ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ರೇಕ್​ ಫೇಲ್ಯೂರ್​ನಿಂದ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಪೂರ್ಣಗೊಂಡ ಬಳಿಕ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ನಾಸಿರಾಬಾದ್​ ಪೊಲೀಸ್​ ಠಾಣಾಧಿಕಾರಿ ರೋಷನ್​ ಲಾಲ್ ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 + 20 =
Remember me
