ಜಮ್ಮು ಕಾಶ್ಮೀರ:ಬಸ್ಸೊಂದು ಆಳವಾದ ಕಂದರಕ್ಕೆ ಬಿದ್ದ ಪರಿಣಾಮ 36 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ (ನ.15) ಸಂಭವಿಸಿದೆ.
ಇದನ್ನೂ ಓದಿ:ಜೆಡಿಎಸ್‌ನಲ್ಲಿ “ಸೆಕ್ಯುಲರ್” ತೆಗೆಯಬೇಕು, ಬಿಜೆಪಿ ಜತೆ ವಿಲೀನ ಖಚಿತ: ಸಿಎಂ ಸಿದ್ದರಾಮಯ್ಯ ಚಾರ್ಜ್
ಇಂದು ಬೆಳಗ್ಗೆ ದೋಡಾ ಜಿಲ್ಲೆಯ ಅಸ್ಸಾರ್ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ನೋಂದಣಿ ಸಂಖ್ಯೆ JK02CN-6555 ಹೊಂದಿರುವ ಬಸ್ ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಬಸ್​ ಬಟೋಟ್-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ಮಾರ್ಗ ಮಧ್ಯೆ ಜಾರಿ ಕಂದರಕ್ಕೆ ಉರುಳಿದೆ ಎಂದು ವರದಿ ಉಲ್ಲೇಖಿಸಿದೆ.
ಘಟನೆ ಬಗ್ಗೆ ಮಾಹಿತಿ ಪಡೆದ ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಕೆಲವು ಮೃತದೇಹಗಳನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ:ಏಕದಿನ ವಿಶ್ವಕಪ್ 2023| ಭಾರತ-ನ್ಯೂಜಿಲೆಂಡ್ ಸೆಮಿಫಿನಾಲೆ ಪಂದ್ಯಕ್ಕೂ ಮುನ್ನ ಪಿಚ್​ ಬದಲಾವಣೆ?
“ದೋಡಾದ ಅಸ್ಸಾರ್‌ನಲ್ಲಿ ಸಂಭವಿಸಿದ ದುರಂತ ಬಸ್ ಅಪಘಾತದಲ್ಲಿ ಜೀವಹಾನಿಯಿಂದ ತೀವ್ರ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು ಮತ್ತು ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸಂತ್ರಸ್ತ ವ್ಯಕ್ತಿಗಳಿಗೆ ಅಗತ್ಯವಿರುವ ಎಲ್ಲಾ ನೆರವು ನೀಡುವಂತೆ ಡಿವಿ ಕಾಮ್ ಮತ್ತು ಡಿಸ್ಟ್ ಅಡ್ಮಿನ್‌ಗೆ ನಿರ್ದೇಶಿಸಲಾಗಿದೆ” ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ತಿಳಿಸಿದರು,(ಏಜೆನ್ಸೀಸ್).
ಈ ವಾರ ಚಿತ್ರಮಂದಿರ ಮತ್ತು ಒಟಿಟಿಗೆ ಲಗ್ಗೆಯಿಡುವ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − two =
Remember me
