ಉತ್ತರಾಖಂಡ:ಭಾನುವಾರ (ಅ.08) 32 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಕಮರಿಗೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 18 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಉತ್ತರಾಖಂಡದ ನೈನಿತಾಲ್‌ನಲ್ಲಿ ವರದಿಯಾಗಿದೆ.
ಇದನ್ನೂ ಓದಿ:Assembly Elections 2023: ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ವೇಳಾಪಟ್ಟಿ ಬಿಡುಗಡೆ
ರಾಜ್ಯ ಅಧಿಕಾರಿಗಳು ಮತ್ತು ಸ್ಥಳೀಯ ನಿವಾಸಿಗಳು ಕೂಡಲೇ ಗಾಯಗೊಂಡ ಪ್ರಯಾಣಿಕರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಯನ್ನು ಕೊಡಿಸಿದ್ದಾರೆ. ಬಸ್ ನೈನಿತಾಲ್‌ನ ಕಲಾಧುಂಗಿ ರಸ್ತೆಯಲ್ಲಿ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ.
VIDEO | Four killed, several injured as bus falls into gorge in Nainital, Uttarakhand; rescue operation underway. More details are awaited.pic.twitter.com/NuSThArRW8
— Press Trust of India (@PTI_News)October 8, 2023

ಘಟನೆಯ ಬೆನ್ನಲ್ಲೇ ನಿತಾಲ್‌ನಲ್ಲಿರುವ ವಿಪತ್ತು ನಿಯಂತ್ರಣ ಕೊಠಡಿಯು ರಾಜ್ಯ ವಿಪತ್ತು ನಿರ್ವಹಣಾ ಪಡೆಗೆ (SDRF) ಎಚ್ಚರಿಕೆ ನೀಡಿತು. ತಕ್ಷಣವೇ ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿ, ಅಪಘಾತದಲ್ಲಿ ಸಿಲುಕಿದವರನ್ನು ರಕ್ಷಣೆ ಮಾಡಿದೆ.
ಇದನ್ನೂ ಓದಿ:ಲಯನ್ಸ್ ಸೇವಾ ದಿನದ ಅಂಗವಾಗಿ ವೃದ್ಧಾಶ್ರಮಕ್ಕೆ‌ ವಸ್ತುಗಳ ಕೊಡುಗೆ
“ಹರಿಯಾಣದ ಹಿಸಾರ್‌ಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಬಸ್‌ನಲ್ಲಿ 30-32 ಪ್ರಯಾಣಿಕರಿದ್ದರು. ನಾವು ಇದುವರೆಗೆ 25 ಜನರನ್ನು ರಕ್ಷಿಸಿದ್ದೇವೆ” ಎಂದು ನೈನಿತಾಲ್ ಎಸ್‌ಎಸ್‌ಪಿ ಪ್ರಹ್ಲಾದ್ ನಾರಾಯಣ್ ಮೀನಾ ಸ್ಥಳೀಯ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ. ಅಪಘಾತಕ್ಕೆ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).
VIDEO | ರೈಲ್ವೇ ನಿಲ್ದಾಣದಲ್ಲಿ ವ್ಯಕ್ತಿ ವರ್ಕೌಟ್​; ವಿಡಿಯೋ ವೈರಲ್​

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:thirteen − 4 =
Remember me
