ಗುಜರಾತ್​:ರಸ್ತೆಯ ಇಳಿಜಾರಿನಲ್ಲಿ ಚಲಿಸುತ್ತಿದ್ದ ವೇಳೆ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 46 ಯಾತ್ರಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಗುಜರಾತಿನ ಬನಸ್ಕಾಂತ ಜಿಲ್ಲೆಯ ಅಂಬಾಜಿಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ರಾಜ್ಯದಲ್ಲಿ 2 ಸಾವಿರ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾರಂಭ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ
ಅಪಘಾತಕ್ಕೆ ಸಿಲುಕಿದ ಹದಿನೆಂಟು ಪ್ರಯಾಣಿಕರನ್ನು ಜಿಲ್ಲಾ ಕೇಂದ್ರ ಪಾಲನ್‌ಪುರದ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಉಳಿದವರಿಗೆ ಅಂಬಾಜಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಇನ್ಸ್‌ಪೆಕ್ಟರ್ ಧವಲ್ ಪಟೇಲ್ ತಿಳಿಸಿದ್ದಾರೆ.
STORY | 46 pilgrims injured after private bus hits rock on slope near Ambaji in Gujarat
READ:https://t.co/H5DT8BVd1I
VIDEO:pic.twitter.com/6BpUrMfknA
— Press Trust of India (@PTI_News)September 24, 2023

ಘಟನೆಯ ವಿವರ:ಅಪಘಾತದಲ್ಲಿ ಗಾಯಗೊಂಡ ಯಾತ್ರಾರ್ಥಿಗಳು ಅರಸೂರು ಬೆಟ್ಟದಲ್ಲಿರುವ ದೇಗುಲದಲ್ಲಿ ಪೂಜೆ ಸಲ್ಲಿಸಿ ಬಸ್‌ನಲ್ಲಿ ಹಿಂತಿರುಗುತ್ತಿದ್ದರು. ಖೇಡಾ ಜಿಲ್ಲೆಯ ಕಂಜರಿ ಗ್ರಾಮದಿಂದ 46 ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್ ಗುಡ್ಡಗಾಡು ಇಳಿಜಾರಿನಲ್ಲಿ ಚಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ. ಬಸ್ ರಸ್ತೆಯ ಪಕ್ಕದಲ್ಲಿದ್ದ ಬಂಡೆಗೆ ಡಿಕ್ಕಿ ಹೊಡೆದ ಪರಿಣಾಮ ಅದರ ಮೇಲ್ಛಾವಣಿ ಕಿತ್ತು ಬಂದಿದೆ ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).
ಕಾವೇರಿ ವಿಚಾರ; ನಮಗೇ ನೀರಿಲ್ಲ ಅಂದಮೇಲೆ ಅವರಿಗೆ ಎಲ್ಲಿಂದ ಕೊಡೋದು?: ನಟ ಅವಿನಾಶ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
