ಅಮೃತಸರ:ಉತ್ತರ ಭಾರತದ ಹಲವು ಭಾಗಗಳಲ್ಲಿ ವರುಣ ಕಳೆದ ಕೆಲವು ದಿನಗಳಿಂದ ಆರ್ಭಟಿಸುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಇದೀಗ ಘಟನೆಯೊಂದರಲ್ಲಿ ಬಸ್​ ಒಂದು ಪ್ರವಾಹದ ನೀರಿನಲ್ಲಿ ಸಿಲುಕಿ ಪಲ್ಟಿಯಾಗಿದ್ದು, ಜೀವ ಉಳಿಸಿಕೊಳ್ಳಲು ಜನ ಪರದಾಡಿದ ಘಟನೆ ಪಂಜಾಬಿನಲ್ಲಿ ನಡೆದಿದೆ.
ಘಟನೆಯೂ ಪಂಜಾಬ್​ನ ಅಂಬಾಲಾ-ಯಮುನಾನಗರ ಹೆದ್ದಾರಿಯಲ್ಲಿ ನಡೆದಿದ್ದು, ಪ್ರವಾಹದ ಹೊಡೆತಕ್ಕೆ ಸಿಲುಕಿ ಬಸ್​ ಪಲ್ಟಿಯಾಗುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ಪ್ರಯಾಣಿಕರನ್ನು ಕ್ರೇನ್​ನ ಮೂಲಕ ರಕ್ಷಿಸುತ್ತಿರುವುದು ಕಂಡು ಬಂದಿದೆ. ಬಸ್​ನಲ್ಲಿ 70 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ. ಈ ಪೈಕಿ 27 ಮಂದಿಯನ್ನು ರಕ್ಷಿಸಲಾಗಿದೆ.
ಇದನ್ನೂ ಓದಿ:ಸರಣಿ ಅಪಘಾತ; ಕೆಕೆಆರ್​ಟಿಸಿ ಬಸ್​ ಚಾಲಕ ಮೃತ್ಯು
ಕಳೆದ ಮೂರು ದಿನಗಳಿಂದ ಉತ್ತರ ಭಾರತದ ಹಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭೂ ಕುಸಿತ ಉಂಟಾಗಿ ಹಲವು ಜೀವಗಳನ್ನು ಬಲಿ ಪಡೆದಿದೆ. ಪಂಜಾಬ್​ನಲ್ಲಿ ಸೋಮವಾರ ಅತಿ ಹೆಚ್ಚು ಮಳೆಯಾಗಲಿದ್ದು, ಹವಾಮಾನ ಇಲಾಖೆ ರೆಡ್​ ಅಲರ್ಟ್​ ಘೋಷಿಸಿದೆ.
ಪಂಜಾಬ್​ನಲ್ಲಿ ಕಳೆದ ಎರಡು ದಿನಗಳಲ್ಲಿ ಶೇ. 70ರಷ್ಟು ಮಳೆಯಾಗಿದ್ದು, ಕಳೆದ 50 ಘಂಟೆಗಳಲ್ಲಿ ಮೊಹಾಲಿ, ಚಂಢೀಗರ್​ ಸೇರಿದಂತೆ ಶೇ. 50ರಷ್ಟು ಮಳೆಯಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
