ಮುಂಬೈ:ಭಾರತದಲ್ಲಿ 2021ರ ವೇಳೆಗೆ ಚಿನ್ನದ ಬೆಲೆ 10 ಗ್ರಾಂಗೆ 82 ಸಾವಿರ ರೂ. ಆಗುವ ಸಾಧ್ಯತೆ ಇರುವುದಾಗಿ ಚಿನಿವಾರ ಪೇಟೆಯ ತಜ್ಞರು ಭವಿಷ್ಯ ನುಡಿದಿದ್ದಾರೆ.
ಕೋವಿಡ್​ 19 ಸೋಂಕಿನ ಹಿನ್ನೆಲೆಯಲ್ಲಿ ಜಾಗತಿಕ ಷೇರುಪೇಟೆ ತಲ್ಲಣಗೊಂಡಿದೆ. ಭವಿಷ್ಯದಲ್ಲಿ ಅದು ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜನರು ಚಿನ್ನದ ಮೇಲೆ ಹೂಡಿಕೆ ಮಾಡಲು ಮುಗಿ ಬೀಳಲಿದ್ದಾರೆ. ತತ್ಪರಿಣಾಮ ಚಿನ್ನದ ಬೆಲೆ ಗಗನವನ್ನು ಸೀಳಿಕೊಂಡು ಹೋಗಲಿದೆ ಎಂದು ಹೇಳಿದ್ದಾರೆ.
ಗುರುವಾರದ ಚಿನಿವಾರ ಪೇಟೆಯ ವಹಿವಾಟು ಅಂತ್ಯಕ್ಕೆ 10 ಗ್ರಾಂ ಚಿನ್ನಕ್ಕೆ 46,352 ರೂ. ದರ ನಿಗದಿಯಾಗಿತ್ತು. ಇದರ ಅರ್ಥ, ಕೇವಲ ಒಂದೂವರೆ ವರ್ಷಗಳ ಅವಧಿಯಲ್ಲಿ ಭಾರತದಲ್ಲಿ ಚಿನ್ನದ ಬೆಲೆ ಶೇ.75 ಹೆಚ್ಚಳ ಕಾಣುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಗೋಲ್ಡ್​ಮ್ಯಾನ್​ ಸ್ಯಾಚ್ಸ್​ ಎಂಬ ಮತ್ತೊಂದು ಜಾಗತಿಕ ಸಂಸ್ಥೆಯ ತಜ್ಞರ ಪ್ರಕಾರ ಹಳದಿ ಲೋಹದ ಮೇಲಿನ ಹೂಡಿಕೆ ಹೆಚ್ಚ ಲಾಭ ತಂದುಕೊಡಲಿದೆ. ಕಚ್ಚಾ ತೈಲದ ಮೇಲಿನ ಹೂಡಿಕೆಗಿಂತಲೂ ಇದು ಆಕರ್ಷಣೀಯವಾಗಿ ಕಾಣುತ್ತಿದೆ ಎಂದು ಹೇಳಿದೆ.ಕಾಕತಾಳೀಯ ಎಂಬಂತೆ ಜಾಗತಿಕವಾಗಿ ಕಚ್ಚಾ ತೈಲದ ಬೆಲೆ ಪಾತಾಳಕ್ಕೆ ಕುಸಿಯಲಿದೆ ಎಂದು ಇದೇ ಗೋಲ್ಡ್​ಮನ್​ ಸ್ಯಾಚ್ಸ್​ ತಜ್ಞರು ಮಾರ್ಚ್​ ಕೊನೆಯಲ್ಲಿ ಅಭಿಪ್ರಾಯಪಟ್ಟಿದ್ದರು. ಅದರಂತೆ ತೈಲ ಬೆಲೆಗಳು ಮೇ ವೇಳಗೆ ಭಾರಿ ಇಳಿಕೆ ಕಂಡಿವೆ.
ಕೋವಿಡ್​ ನಂತರದಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಮರುರಚಿಸಬೇಕು; ಭಾರತದ ವಾದಕ್ಕೆ ಆಸ್ಟ್ರೇಲಿಯಾದ ಬೆಂಬಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two − one =
Remember me
