ಚೆನ್ನೈ:ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಗಳು ಸತತವಾಗಿ ನಡೆಯುತ್ತಲೇ ಇವೆ. ಇದೊಂದು ಮುಸ್ಲಿಂ ವಿರೋಧಿ ಎಂಬ ಅಭಿಪ್ರಾಯವನ್ನು ಹಲವರು ವ್ಯಕ್ತಪಡಿಸುತ್ತಿದ್ದಾರೆ.
ಹಲವು ಪ್ರತಿಪಕ್ಷಗಳೂ ಸಹ ಸಿಎಎ, ಎನ್​ಆರ್​ಸಿ, ಎನ್​ಪಿಆರ್​ಗಳಿಗೆ ವಿರೋಧ ವ್ಯಕ್ತಪಡಿಸುತ್ತಿವೆ. ಹಾಗೇ ಸೂಪರ್​ ಸ್ಟಾರ್​ ರಜನೀಕಾಂತ್​ ಕೂಡ ಸಿಎಎ ಮತ್ತು ಎನ್​ಪಿಆರ್​ ಬಗ್ಗೆ ಮಾತನಾಡಿದ್ದಾರೆ.ಚೆನ್ನೈನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್​ಪಿಆರ್​) ದೇಶಕ್ಕೆ ತುಂಬ ಮುಖ್ಯ. ಇದನ್ನು ಹಿಂದೆ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದ್ದಾಗಲೂ ಎನ್​ಪಿಆರ್​ನ್ನು ಮಾಡಿತ್ತು ಎಂದಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿಎಎಯಿಂದ ಮುಸ್ಲಿಮರಿಗೆ ಯಾವುದೇ ತೊಂದರೆಯೂ ಆಗುವುದಿಲ್ಲ. ಹಾಗೊಮ್ಮೆ ಭಾರತದ ಮುಸ್ಲಿಂ ಸಮುದಾಯಕ್ಕೆ ಸಿಎಎಯಿಂದ ಸಮಸ್ಯೆಯಾದರೆ ಅದರ ವಿರುದ್ಧ ಧ್ವನಿ ಎತ್ತುವ ಮೊದಲ ವ್ಯಕ್ತಿ ನಾನೇ ಆಗಿರುತ್ತೇನೆ ಎಂದು ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಭಾರತೀಯ ಮುಸ್ಲಿಮರಿಗೆ ಯಾವುದೇ ಅಪಾಯವಿಲ್ಲ ಎಂದು ಕೇಂದ್ರ ಸರ್ಕಾರವೇ ಭರವಸೆ ನೀಡಿದೆ ಎಂದು ರಜನೀಕಾಂತ್​ ತಿಳಿಸಿದ್ದಾರೆ.
ಅಷ್ಟಕ್ಕೂ ಭಾರತದ ವಿಭಜನೆಯಾದ ಬಳಿಕ ಈ ದೇಶವನ್ನೇ ಆಯ್ಕೆ ಮಾಡಿಕೊಂಡು ನೆಲೆಸಿರುವ ಮುಸ್ಲಿಮರನ್ನು ಈಗ ಹೊರಗೆ ಕಳಿಸಲು ಹೇಗೆ ಸಾಧ್ಯ ಎಂದು ಅವರು ಪ್ರಶ್ನಿಸಿದ್ದಾರೆ.
ಕೆಲವು ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥ ಸಾಧನೆಗಾಗಿ ಜನರನ್ನು ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರಚೋದಿಸುತ್ತಿದ್ದಾರೆ ಎಂದು ಆರೋಪಿಸಿದ ರಜನೀಕಾಂತ್​, ಸಿಎಎ ವಿರೋಧಿ ಪ್ರತಿಭಟನೆಗಳನ್ನು ಬೆಂಬಲಿಸುತ್ತಿರುವ ಕೆಲವು ಧಾರ್ಮಿಕ ಮುಖಂಡರ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 14 =
Remember me
